Advertisement

Sheikh Hasina ಆಶ್ರಯ: ಯುಕೆ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಮಾತನಾಡಿದ ಜೈಶಂಕರ್

05:24 PM Aug 08, 2024 | Team Udayavani |

ಹೊಸದಿಲ್ಲಿ: ಸದ್ಯ ಭಾರತದ ಆಶ್ರಯದಲ್ಲಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಆಶ್ರಯ ನೀಡುವ ವಿಚಾರಕ್ಕೆ ಸಂಬಂಧಿಸಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲಾಮ್ಮಿ ಅವರೊಂದಿಗೆ ಗುರುವಾರ (ಆಗಸ್ಟ್ 8 ) ಮಹತ್ವದ ಮಾತುಕಥೆ ನಡೆಸಿದ್ದಾರೆ.

Advertisement

ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ರಣಧೀರ್ ಜೈಸ್ವಾಲ್ ‘ವಿದೇಶಾಂಗ ಸಚಿವರು ಯುಕೆ ವಿದೇಶಾಂಗ ಕಾರ್ಯದರ್ಶಿಯೊಂದಿಗೆ ಬಾಂಗ್ಲಾದೇಶದ ಬೆಳವಣಿಗೆಗಳು ಮತ್ತು ಮಧ್ಯ ಏಷ್ಯಾದ ಬೆಳವಣಿಗೆಗಳ ಕುರಿತು ಮಾತನಾಡಿದ್ದಾರೆ ಎಂದು ತಿಳಿಸಿದ್ದಾರೆ.

ಹಸೀನಾ ಅವರ ಭವಿಷ್ಯದ ಯೋಜನೆಗಳ ಬಗ್ಗೆ ಇಲ್ಲಿಯವರೆಗೆ ಭಾರತ ಸರಕಾರವಾಗಲೀ ಅಥವಾ ಯುಕೆಯಾಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಯುಕೆ ಹೋಮ್ ಆಫೀಸ್ ಮೂಲಗಳು PTI ಸುದ್ದಿ ಸಂಸ್ಥೆಗೆ ದೇಶದ ವಲಸೆ ನಿಯಮಗಳು ನಿರ್ದಿಷ್ಟವಾಗಿ ವ್ಯಕ್ತಿಗಳು ದೇಶದ ಆಶ್ರಯ ಪಡೆಯಲು ಪ್ರಯಾಣಿಸಲು ಅನುಮತಿಸುವುದಿಲ್ಲ ಎಂದು ತಿಳಿಸಿವೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳು ಮತ್ತು ದೇವಾಲಯಗಳ ಮೇಲೆ ದಾಳಿಗಳು ಭಾರತಕ್ಕೆ ವಿಶೇಷವಾಗಿ ಕಳವಳಕಾರಿಯಾಗಿದ್ದು, ಅಲ್ಲಿನ ಅಲ್ಪಸಂಖ್ಯಾತಕಣೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಸಂಘಟನೆಗಳು ಮತ್ತು ಸಂಸ್ಥೆಗಳಿಂದ ವಿವಿಧ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next