ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಕಾಂಗ್ರೆಸ್ ಮುಖಂಡ ಜೈವೀರ್ ಶೆರ್ಗಿಲ್ ಬುಧವಾರ (ಆಗಸ್ಟ್ 24) ಘೋಷಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ.
ಇದನ್ನೂ ಓದಿ:ಸಂತೋಷ್ ಪಾಟೀಲ್ ಕೇಸ್: ಕೋರ್ಟ್ ನಲ್ಲೂ ನನಗೆ ಕ್ಲೀನ್ ಚಿಟ್ ಸಿಗುತ್ತದೆ; ಈಶ್ವರಪ್ಪ
ಕಾಂಗ್ರೆಸ್ ಪಕ್ಷ ನಿರ್ಧಾರಗಳನ್ನು ತೆಗೆದುಕೊಳ್ಳುವುದು ದೇಶದ ಮತ್ತು ಸಾರ್ವಜನಿಕ ಹಿತಾಸಕ್ತಿಗಳಿಗಾಗಿ ಅಲ್ಲ ಎಂದು ಹೇಳಲು ನನಗೆ ನೋವಾಗುತ್ತಿದೆ. ಇದು ವ್ಯಕ್ತಿಗಳ ಸ್ವ ಸೇವೆಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ಅಷ್ಟೇ ಅಲ್ಲ ನಿರಂತರವಾಗಿ ವಾಸ್ತವತೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಶೆರ್ಗಿಲ್ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿಗೆ ಬರೆದ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿರುವುದಾಗಿ ವರದಿ ವಿವರಿಸಿದೆ.
ವರದಿಯ ಪ್ರಕಾರ, ಕಳೆದ ಕೆಲವು ತಿಂಗಳಿನಿಂದ ಜೈವೀರ್ ಶೆರ್ಗಿಲ್ ಅವರಿಗೆ ಯಾವುದೇ ಪತ್ರಿಕಾಗೋಷ್ಠಿ ನಡೆಸಲು ಅನುಮತಿ ನೀಡಿರಲಿಲ್ಲವಾಗಿತ್ತು. ಕಾಂಗ್ರೆಸ್ ಹಿರಿಯ ಮುಖಂಡರಾದ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಪಕ್ಷದ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಇದೀಗ ಜೈವೀರ್ ಕೂಡಾ ರಾಜೀನಾಮೆ ನೀಡಿದವರ ಪಟ್ಟಿಯಲ್ಲಿ ಸೇರ್ಪಡೆಗೊಂಡಂತಾಗಿದೆ.
ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದ್ದ ಜಿ23 ಗುಂಪಿನಲ್ಲಿ ಗುಲಾಂ ನಬಿ ಆಜಾದ್ ಮತ್ತು ಆನಂದ್ ಶರ್ಮಾ ಕೂಡಾ ಪ್ರಮುಖ ನಾಯಕರಾಗಿದ್ದಾರೆ.