Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರ ವೇಳೆಗೆ ಎಲ್ಲ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶ ಕೇಂದ್ರ ಸರಕಾರದ್ದಾಗಿದೆ. ತಾಲೂಕಿನಲ್ಲಿ 17285 ಮನೆಗಳನ್ನು ಗುರುತಿಸಿದ್ದು, 11998 ಮನೆಗಳ ಆನ್‌ಲೈನ್ ಎಂಟ್ರಿ ಆಗಿದೆ. ಹಾವೇರಿ ಜಿಲ್ಲೆಯಲ್ಲಿ 103862 ಮನೆಗಳನ್ನು ಗುರುತಿಸಲಾಗಿದೆ. ಈ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಪೂರೈಸಲಾಗುತ್ತದೆ. ರಾಜ್ಯ ಸರಕಾರ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗೆ 2000 ರೂ ಜಮೆ ಮಾಡುತ್ತಿದ್ದು, ತಾಲೂಕಿನಲ್ಲಿ ಒಟ್ಟು 5015 ನೊಂದಣಿಯಾದ ಫಲಾನುಭವಿಗಳಿದ್ದು, ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ನೋಂದಣಿ ಸಂಖ್ಯೆ, ಖಾತೆ ಸಂಖ್ಯೆ, ಐಎಫ್‌ಎಸ್‌ಸಿ ಕೋಡ್ ಮತ್ತು ಆಧಾರ ಸಂಖ್ಯೆಯೊಂದಿಗೆ ದಾಖಲಾತಿಗಳನ್ನು (ಮೊ.ನಂ. 9741614490) ಈ ಸಂಖ್ಯೆಗೆ ವಾಟ್ಸ್‌ಆ್ಯಪ್ ಮಾಡಿದಲ್ಲಿ ನೇರವಾಗಿ ನಿಮ್ಮ ಖಾತೆಗೆ 2000 ರೂ. ಮೊತ್ತ ಜಮೆಯಾಗಲಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಾಪಂ ಆವರಣದಲ್ಲಿ ಕಾರ್ಮಿಕ ಇಲಾಖೆ ಸೇವಾ ಸಿಂದು ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಿರಿ ಎಂದು ತಿಳಿಸಿದ್ದಾರೆ. Advertisement
ಜಲ್ ಜೀವನ ಮಿಶನ್ ಆರಂಭ
06:17 PM Apr 20, 2020 | Suhan S |
Advertisement
Udayavani is now on Telegram. Click here to join our channel and stay updated with the latest news.