ಚೆನ್ನೈ: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಗೂಳಿ ಪಳಗಿಸುವ ಕ್ರೀಡೆ ಜಲ್ಲಿಕಟ್ಟು ವೀಕ್ಷಿಸಲು ಬಂದಿದ್ದ 14 ವರ್ಷದ ಬಾಲಕ ಗೂಳಿಯೊಂದರ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ತಡಂಗಂ ಗ್ರಾಮದಲ್ಲಿ ಕಾರ್ಯಕ್ರಮ ನಡೆದಿದೆ.
ಘಟನೆ ನಡೆದಾಗ ಗೋಕುಲ್ ತನ್ನ ಸಂಬಂಧಿಕರೊಂದಿಗೆ ಜಲ್ಲಿಕಟ್ಟು ವೀಕ್ಷಿಸಲು ತೆರಳಿದ್ದರು. ಗೂಳಿಯೊಂದು ಆತನ ಹೊಟ್ಟೆಗೆ ನುಗ್ಗಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಗೋಕುಲ್ ಅವರನ್ನು ಧರ್ಮಪುರಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.
ಧರ್ಮಪುರಿ ಪೊಲೀಸರು ತನಿಖೆ ಆರಂಭಿಸಿದ್ದು, ಗೋಕುಲ್ ಹೇಗೆ ಗಾಯಗೊಂಡಿದ್ದಾರೆ ಎಂಬುದನ್ನು ಪತ್ತೆ ಹಚ್ಚಲು ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ:ರಾಜ್ಯದ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇವೆ: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ
Related Articles
ಗೋಕುಲ್ ಈ ವರ್ಷ ಜಲ್ಲಿಕಟ್ಟು ಸಂಬಂಧ ಸಾವನ್ನಪ್ಪಿದ ನಾಲ್ಕನೇ ವ್ಯಕ್ತಿಯಾಗಿದ್ದರು.
ಪೊಂಗಲ್ ಸುಗ್ಗಿಯ ಸಮಯದಲ್ಲಿ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಆಡಲಾಗುತ್ತದೆ. ಪಳಗಿಸುವವನು ಗೂಳಿಯ ಗೂನು ಮೇಲೆ ಹಿಡಿದಿರುವ ಅವಧಿಯನ್ನು ಆಧರಿಸಿ ವಿಜೇತರನ್ನು ನಿರ್ಧರಿಸಲಾಗುತ್ತದೆ.