Advertisement

ಇಂಧನ ಬೆಲೆ ಏರಿಕೆಗೆ ಆಕ್ರೋಶ

05:32 PM Jun 26, 2020 | Naveen |

ಜಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಹೆಚ್ಚಳ ಖಂಡಿಸಿ ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ವತಿಯಿಂದ ಗುರುವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

Advertisement

ಪಟ್ಟಣದ ಪ್ರವಾಸಿಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಅತ್ಯಂತ ಕಡಿಮೆ ಇದ್ದು ಭಾರತದಲ್ಲಿ ಮಾತ್ರ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಗಗನಕ್ಕೇರುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಕೇಂದ್ರ ಸರ್ಕಾರ ಕೂಡಲೇ ಜಾರಿಗೆ ಬರುವಂತೆ ಇಂಧನ ಬೆಲೆಯನ್ನು ಕಡಿಮೆಗೊಳಿಸಬೇಕು. ಹಿಂದೆ ಇದ್ದ ಹಾಗೆ ಬೆಲೆ ನಿಯಂತ್ರಣವನ್ನು ತನ್ನ ಸುಪರ್ದಿಗೆ ತೆಗೆದುಕೊಂಡು ಯಾವುದೇ ಕಂಪನಿಗಳು ಕೈಗೊಳ್ಳುವ ಬೆಲೆ ಏರಿಕೆ ಮತ್ತು ಇಳಿಕೆ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ರೈತ ಸಂಘದ (ಹುಚ್ಚವ್ವನಹಳ್ಳಿ ಮಂಜುನಾಥ ಬಣ) ಗೌಡಗೊಂಡನಹಳ್ಳಿ ಸತೀಶ್‌, ಗಂಗಾಧರಪ್ಪ, ದೊಣೆಹಳ್ಳಿ ಲೋಕೇಶ್‌, ರಾಜು, ರಂಗಪ್ಪ, ಶಾಂತಪ್ಪ, ಹೊನ್ನೂರಾಲಿ, ನಾಗರಜ್‌, ಕೆಂಚಪ್ಪ, ಶರಣಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next