Advertisement

ದಾನ ಪ್ರವೃತ್ತಿ ರೂಢಿಸಿಕೊಳ್ಳಿ

04:09 PM Apr 26, 2020 | Naveen |

ಜಗಳೂರು: ಅಮೇರಿಕ, ಚೀನಾ, ಇಟಲಿ ಸೇರಿದಂತೆ ಮುಂದುವರಿದ ರಾಷ್ಟ್ರಗಳಲ್ಲಿ ಕೋವಿಡ್ ಹಾವಳಿಯಿಂದ ಪ್ರತಿನಿತ್ಯ ಸಾವಿರಾರು ಜನ ಸಾಯುತ್ತಿದ್ದಾರೆ. ಆದರೆ ನಮ್ಮ ದೇಶದಲ್ಲಿ ಪರಿಸ್ಥಿತಿ ಕೈಮೀರದಂತೆ ಪ್ರಧಾನಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

Advertisement

ಪಟ್ಟಣದ ತರಳುಬಾಳು ಕೆಂದ್ರದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಹಾರ ಕಿಟ್‌ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೋವಿಡ್ ಮಹಾ ಮಾರಿ ಇಡೀ ವಿಶ್ವವನ್ನೇ ನಡುಗಿಸಿದೆ. ಹಾಗಾಗಿ ಪ್ರತಿಯೊಬ್ಬರೂ  ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇಂಥ ಕಷ್ಟದ ಪರಿಸ್ಥಿತಿಯಲ್ಲಿ ಉಳ್ಳವರು ಇಲ್ಲದವರಿಗೆ ದಾನ ಮಾಡುವಂತ ಗುಣಗಳನ್ನು ಬೆಳೆಸಿಕೊಳ್ಳಬೇಕು. ಫೋಟೋಗೆ ಫೋಸ್‌ ನೀಡುವಂತಹ ಕೆಲಸ ಮಾಡಬಾರದು ಎಂದರು.

ಯಾರು ಕೂಡ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ನೆಗಡಿ, ಕೆಮ್ಮು, ಜ್ವರ ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು. ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ಸವಿತಾ ಸಮಾಜ, ಅಲೆಮಾರಿ ಸಮಾಜ, ಛಾಯಾಗ್ರಾಹಕರು, ಆಟೋ ಚಾಲಕರು,ಬಟ್ಟೆ ಹೊಲೆಯುವವರು ಸೇರಿದಂತೆ ಬಹುತೇಕ ಸಮುದಾಯಗಳಿಗೆ ಸುಮಾರು 2 ಸಾವಿರ ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ ದಾನಿಗಳು ಸಹಕಾರ ನೀಡುತ್ತಿದ್ದು ಆರ್ಹರಿಗೆ ಆಹಾರದ ಕಿಟ್‌
ಗಳನ್ನು ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ನಂತರ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಮಾಲರಿಗೆ ಆಹಾರ ಕಿಟ್‌ಗಳನ್ನು ಸಂಸದರು ವಿತರಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಹುಲ್ಲುಮನಿ ತಿಮ್ಮಣ್ಣ, ತಾಪಂ ಇಒ ಮಲ್ಲಾ ನಾಯ್ಕ, ಸಿಪಿಐ ದುರುಗಪ್ಪ, ಪಿಎಸ್‌ಐ ಉಮೇಶ್‌ಬಾಬು, ಎಪಿಎಂಸಿ ಕಾರ್ಯದರ್ಶಿ ಯೋಗರಾಜು, ಅಧ್ಯಕ್ಷ ಹನುಮಂತಪ್ಪ, ಮಾಜಿ ಅಧ್ಯಕ್ಷ ಡಕ್‌ ರಾಜಣ್ಣ, ಬಿಜೆಪಿ ತಾಲೂಕು ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್‌, ಮುಖಂಡರಾದ ಬಿಸ್ತುವಳ್ಳಿ ಬಾಬು,  ಸೂರರೆಡ್ಡಿಹಳ್ಳಿ ಶರಣಪ್ಪ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next