ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಬಿಸಿ ಸಿದ್ಧಪಡಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರ “ಇಂಡಿಯಾ: ದ ಮೋದಿ ಕ್ವೆಶ್ಚನ್’ ಪ್ರದರ್ಶಿಸುವ ಯೋಜನೆಯನ್ನು ಘೋಷಿಸಿದ ನಂತರ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಕೇಂದ್ರೀಯ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ವಿಶ್ವವಿದ್ಯಾನಿಲಯದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಘಟಕ ಮತ್ತು ಇತರ ವಿದ್ಯಾರ್ಥಿ ಗುಂಪುಗಳು ಕಾಲೇಜು ಕ್ಯಾಂಪಸ್‌ನಲ್ಲಿ ಸಂಜೆ 6 ಗಂಟೆಗೆ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ಯೋಜನೆಯನ್ನು ಘೋಷಿಸಿದ್ದರು. ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಜಾಮಿಯಾ ಮಿಲಿಯಾ ಇಸ್ಲಾಮಿಯಾ ಪ್ರಧಾನಿ ಮೋದಿ ಕುರಿತ ಬಿಬಿಸಿ ದಾಖಲೆಯನ್ನು ಪ್ರದರ್ಶಿಸಲು ಅನುಮತಿ ನಿರಾಕರಿಸಿದೆ.
ಬಿಬಿಸಿ ಸಿದ್ಧಪಡಿಸಿರುವ ಸಾಕ್ಷ್ಯಚಿತ್ರವನ್ನು ಕೇರಳ ಮತ್ತು ಹೈದರಾಬಾದ್‌ನಲ್ಲಿ ಪ್ರದರ್ಶಿಸಲಾಗಿದೆ. ಕೇರಳ ರಾಜಧಾನಿ ತಿರುವನಂತಪುರದ ಪೂಜಪುರ ಎಂಬಲ್ಲಿ ಮಂಗಳವಾರ ಸಂಜೆ ಡಿವೈಎಫ್ಐನಿಂದ ಅದನ್ನು ಪ್ರದರ್ಶಿಸಲಾಗಿದೆ. ಈ ಸಂದರ್ಭದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದೆ.
Related Articles
ಹೇಗೆ ಪರಿಣಾಮ ಬೀರಬಹುದು?
ಸಾಕ್ಷ್ಯಚಿತ್ರವು ನಮ್ಮ ರಾಷ್ಟ್ರದ ಸಾರ್ವಭೌಮತ್ವದ ಮೇಲೆ ಹೇಗೆ ಪರಿಣಾಮ ಬೀರಬಹುದು? ನಿಷೇಧವು ಕೇಂದ್ರದ ಅತಿಯಾದ ಪ್ರತಿಕ್ರಿಯೆ ಮತ್ತು ಅನಗತ್ಯವಾಗಿದೆ. ನಮ್ಮದು ಬಲಿಷ್ಠ ದೇಶ, ಇದನ್ನು ನಿರ್ಲಕ್ಷಿಸಬಹುದಿತ್ತು. ನಮ್ಮ ಸಾರ್ವಭೌಮತ್ವ ಮತ್ತು ರಾಷ್ಟ್ರೀಯ ಭದ್ರತೆಯು ಸಾಕ್ಷ್ಯಚಿತ್ರದಿಂದ ಸುಲಭವಾಗಿ ಪರಿಣಾಮ ಬೀರುವ ವಿಷಯವಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ.