ನವದೆಹಲಿ:ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯೊಳಗೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಯೂನಿರ್ವಸಿಟಿಯ ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ ಘಟನೆ ಗುರುವಾರ(ಸೆಪ್ಟೆಂಬರ್ 29) ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಗಾಯಗೊಂಡ ಜಸ್ಪ್ರೀತ್ ಬುಮ್ರಾ ಬದಲಿಗೆ ವೇಗಿಯನ್ನು ನೇಮಿಸಿದ ಬಿಸಿಸಿಐ
ಗುರುವಾರ ಬೆಳಗ್ಗೆಯಿಂದಲೇ ಯೂನಿರ್ವಸಿಟಿ ಕ್ಯಾಂಪಸ್ ನೊಳಗೆ ವಿದ್ಯಾರ್ಥಿಗಳ ನಡುವೆ ಘರ್ಷಣೆ ಆರಂಭವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂಜೆ ಜಾಮಿಯಾ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ನೋಮಾನ್ ಚೌಧರಿ ಎಂಬ ವಿದ್ಯಾರ್ಥಿಯ ತಲೆಗೆ ಪೆಟ್ಟು ಬಿದ್ದಿದ್ದು, ಆತನನ್ನು ಹೋಲಿ ಫ್ಯಾಮಿಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾತ್ರಿ ಗೆಳೆಯ ನೋಮಾನ್ ಆರೋಗ್ಯ ವಿಚಾರಿಸಲು ವಿದ್ಯಾರ್ಥಿ ನೌಮನ್ ಅಲಿ ಆಸ್ಪತ್ರೆಗೆ ಭೇಟಿ ನೀಡಿದ್ದ. ವೇಳೆ ಮತ್ತೊಂದು ಗುಂಪಿನ ವಿದ್ಯಾರ್ಥಿ ಝಲಾಲ್ ಎಂಬಾತ ತಂಡದೊಂದಿಗೆ ಆಗಮಿಸಿ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ನ ಹೊರಭಾಗದಲ್ಲಿ ನೌಮನ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಎಂದು ವರದಿ ವಿವರಿಸಿದೆ.
ನೌಮನ್ ಅಲಿ ಗಾಯಕ್ಕೆ ಚಿಕಿತ್ಸೆ ನೀಡಲಾಗಿದ್ದು, ಆತನನ್ನು ಏಮ್ಸ್ ಗೆ ಸ್ಥಳಾಂತರಿಸಲಾಗಿದೆ. ಘಟನೆ ಬಗ್ಗೆ ಆತ ಪೊಲೀಸರಿಗೆ ವಿವರಣೆ ನೀಡಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣದ ಬಗ್ಗೆ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.