ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆ ಕುರಿತು ಕೇಂದ್ರ ಗೃಹ ಸಚಿವಾಲಯದ ಪರಿಶೀಲನೆ ನಂತರ ಚುನಾವಣೆ ದಿನಾಂಕವನ್ನು ಘೋಷಿಸಲಾಗುವುದು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನೊಂದೆಡೆ, ಇನ್ನು ಕೆಲವೇ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿವೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.
“ಮೊದಲು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ನೆಲೆಸಲಿ. ನಂತರವಷ್ಟೇ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡುತ್ತಾರೆ.
ವಾಸ್ತವ ಪರಿಸ್ಥಿತಿ ಕುರಿತು ಕೇಂದ್ರ ಗೃಹ ಸಚಿವಾಲಯದ ವರದಿ ನಂತರ ಚುನಾವಣಾ ದಿನಾಂಕಗಳನ್ನು ಘೋಷಿಸಲಾಗುವುದು,’ ಎಂದು ಆಯೋಗದ ಅಧಿಕಾರಿ ಹೇಳಿದ್ದಾರೆ. ಜಮ್ಮುವಿನಲ್ಲಿ 43 ವಿಧಾನಸಭೆ ಕ್ಷೇತ್ರಗಳು ಹಾಗೂ ಕಾಶ್ಮೀರದಲ್ಲಿ 47 ವಿಧಾನಸಭೆ ಕ್ಷೇತ್ರಗಳಿವೆ.