ನವದೆಹಲಿ: ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರಡಾ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ.
ಜಮ್ಮು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕರಾಗಿರುವ ಶೇಖ್ ಆದಿಲ್ ಮುಷ್ತಾಕ್ ಅವರನ್ನು ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಷ್ಟು ಮಾತ್ರವಲ್ಲದೆ ಭಯೋತ್ಪಾದಕರಿಗೆ ಸಹಾಯ ಮಾಡಿದ ಮತ್ತು ಸಹ ಪೊಲೀಸ್ ಅಧಿಕಾರಿಯನ್ನು ಬಲೆಗೆ ಬೀಳಿಸಲು ಯತ್ನಿಸಿದ ಆರೋಪ ಅವರ ಕೂಡ ಇವರ ಮೇಲಿದೆ.
ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಆದಿಲ್ ವಿರುದ್ಧದ ಪ್ರಕರಣದ ತನಿಖೆಗೆ ಐವರು ಸದಸ್ಯರ ವಿಶೇಷ ತನಿಖಾ ತಂಡವನ್ನು ನೇಮಿಸಲಾಗಿದೆ. ಕಳೆದ ಮಾರ್ಚ್‌ನಲ್ಲಿ ಆದಿಲ್ ಅವರನ್ನು ತನಿಖೆಗಾಗಿ ಸೇವೆಯಿಂದ ಅಮಾನತುಗೊಳಿಸಲಾಗಿತ್ತು.
ಇದನ್ನೂ ಓದಿ: Justin Trudeau: ಭಾರತ ಅಭಿವೃದ್ಧಿ ಪ್ರಧಾನ ದೇಶ, ಯಾವುದೇ ಕಾರಣಕ್ಕೂ ಪ್ರಚೋದಿಸಲ್ಲಾ: ಟ್ರುಡೊ