ಜಮ್ಮು-ಕಾಶ್ಮೀರ: ರಾಂಬನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಸಂಭವಿಸಿದೆ. ಅಲ್ಲದೇ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ ಎಂದು ಶನಿವಾರ (ಜುಲೈ10) ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಗೋವಾ: ಹೊರ ರಾಜ್ಯಗಳಿಂದ ಹೆಚ್ಚಿನ ವಾಹನಗಳ ಆಗಮನ: ಕಟ್ಟುನಿಟ್ಟಾದ ಕೋವಿಡ್ ತಪಾಸಣೆ
ಕಾಶ್ಮೀರದ ಈ 270 ಕಿಲೋ ಮೀಟರ್ ಉದ್ದದ ಹೆದ್ದಾರಿ ದೇಶದ ಉಳಿದ ಭಾಗಗಳನ್ನು ಸಂಪರ್ಕಿಸುವ ಏಕೈಕ ಮಾರ್ಗವಾಗಿದೆ. ರಾಮ್ ಸೂ ಪ್ರದೇಶದ ಮಗರ್ ಕೋಟ್ ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಹೆದ್ದಾರಿ ಬಂದ್ ನಿಂದಾಗಿ ವಿವಿಧ ಸ್ಥಳಗಳಲ್ಲಿ 500 ಅಧಿಕ ಘನ ವಾಹನಗಳು ಹಾಗೂ ಲಘು ಮೋಟಾರು ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿರುವುದಾಗಿ ತಿಳಿಸಿದೆ. ಪ್ರದೇಶದಲ್ಲಿ ವಾಹನಗಳ ಸಂಚಾರ ವ್ಯವಸ್ಥೆಗೆ ಅವಕಾಶ ಕಲ್ಪಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಗರ್ ಕೋಟ್ ನಲ್ಲಿ ಭಾರೀ ಭೂಕುಸಿತದಿಂದಾಗಿ ಲಘು ಮೋಟಾರ್ ವಾಹನದ ಎಲ್ಲಾ ಪ್ರಯಾಣಿಕರು ಬನಿಹಾಲ್ ಅಥವಾ ರಾಂಬನ್ ಕಡೆಯಿಂದ ಹಿಂದಿರುಗಿ ಹೋಗಲು ಅವಕಾಶ ಕೊಡುವಂತೆ ಮನವಿ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ.