ತಿರುವನಂತಪುರ: ಪ್ರಸ್ತುತ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಶೀಘ್ರವೇ ರಾಜ್ಯದ ಸ್ಥಾನಮಾನ ನೀಡುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ.
ತಿರುವನಂತಪುರದಲ್ಲಿ ಮಾತನಾಡಿದ ಅವರು, “ಪ್ರಧಾನಿ ಮೋದಿ ಅವರು 2014ರಲ್ಲಿ 14ನೇ ಹಣಕಾಸು ಆಯೋಗದ ವರದಿಯ ಶಿಫಾರಸ್ಸಿಗೆ ಪ್ರಧಾನಿ ನರೇಂದ್ರ ಮೋದಿ ಒಪ್ಪಿಗೆ ಸೂಚಿಸಿದ್ದಾರೆ. ಸಂಗ್ರಹಿಸಲಾದ ತೆರಿಗೆಗಳ ಪೈಕಿ ಶೇ.32ನ್ನು ರಾಜ್ಯಗಳಿಗೆ ನೀಡಲಾಗುತ್ತಿತ್ತು. ರಾಜ್ಯಗಳಿಗೆ ಹೆಚ್ಚಿನ ಪಾಲು ಸಿಗಬೇಕು ಎಂಬ ದೃಷ್ಟಿಯಿಂದ ರಾಜ್ಯಗಳಿಗೆ ನೀಡುವ ತೆರಿಗೆ ಪ್ರಮಾಣವನ್ನು ಶೇ.42ಕ್ಕೆ ಹೆಚ್ಚಿಸಲಾಯಿತು. ಕೇಂದ್ರ ಸರ್ಕಾರ ಕಡಿಮೆ ಪಾಲು ಇರಿಸಿಕೊಂಡು ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ, ಜಮ್ಮು ಮತ್ತು ಕಾಶ್ಮೀರ ಸದ್ಯ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಅದರ ಪ್ರಮಾಣ ಶೇ.41ಕ್ಕೆ ಮತ್ತೆ ಇಳಿಕೆಯಾಗಿದೆ. ಆದರೆ ಮುಂದಿನ ದಿನಗಳಲ್ಲಿ ಅಥವಾ ಶೀಘ್ರವೇ ರಾಜ್ಯದ ಮಾನ್ಯತೆ ನೀಡುವ ಸಾಧ್ಯತೆ ಇದೆ’ ಎಂದು ಹೇಳಿದ್ದಾರೆ.