Advertisement

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

11:23 AM Jun 02, 2023 | Team Udayavani |

ರಜೌರಿ (ಜಮ್ಮು- ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿದೆ.

Advertisement

ರಜೌರಿ ಜಿಲ್ಲೆಯ ದಸ್ಸಾಲ್ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಭದ್ರತಾ ಪಡೆಗಳಿಗೆ ಸುಳಿವು ಸಿಕ್ಕಿದ್ದು, ಈ ಮಾಹಿತಿ ಆಧರಿಸಿ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದರು.

ಭದ್ರತಾ ಪಡೆಗಳು ಉಗ್ರರ ಅಡಗುತಾಣಗಳ ಬಳಿಗೆ ಹೋಗುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿ ದಾಳಿ ನಡೆಸಿ ಓರ್ವ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಈ ಪ್ರದೇಶದಲ್ಲಿ ಎಷ್ಟು ಉಗ್ರರು ಅಡಗಿದ್ದಾರೆ ಎಂಬ ಬಗ್ಗೆ ತಿಳಿದುಬಂದಿಲ್ಲ.ಸದ್ಯ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಮುಂದುವರಿಸಿವೆ. ಸ್ಥಳೀಯ ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next