Advertisement

ಬಂಡಿಪೋರಾ ಸೇನಾ ನೆಲೆ ಮೇಲೆ ಉಗ್ರರ ದಾಳಿ : 3 ಸೈನಿಕರಿಗೆ ಗಾಯ 

08:48 AM Jul 08, 2017 | Team Udayavani |

ಶ್ರೀನಗರ : ಬಂಡಿಪೋರಾದ ಹಾಜಿನ್‌ ಪ್ರದೇಶದಲ್ಲಿರುವ ಸೇನಾ ನೆಲೆಯ ಮೇಲೆ ಶನಿವಾರ ಬೆಳಗ್ಗೆ ಉಗ್ರರು ದಾಳಿ ನಡೆಸಿದ್ದು , ಮೂವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಭದ್ರತಾ ಪಡೆಗಳು ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆಸಿದ್ದಾರೆ. 

Advertisement

ಹಿಜ್‌ಬುಲ್‌ ಮುಜಾಹಿದೀನ್‌ ಕಮಾಂಡರ್‌, ಉಗ್ರ ಬುರ್ಹಾನ್‌ ವಾನಿಯ ಹತ್ಯೆಗೆ ಇಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆಸಲು ಸಿದ್ಧತೆ ನಡೆಸಲಾಗಿದೆ.  ಭದ್ರತೆಯನ್ನು ಆಯೋಜಿಸಲಾಗಿದೆ. ಕಣಿವೆಯಲ್ಲಿ ಲೀಸ್‌ ಲೈನ್‌ನಲ್ಲಿ ನಡೆಯುವ ಸಾಮಾಜಿಕ ಜಾಲ ತಾಣಗಳನ್ನು ಬ್ಲಾಕ್‌ ಮಾಡಲಾಗಿದ್ದು ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ. ಶ್ರೀನಗರ ಮತ್ತು ಬಾರಾಮುಲ್ಲಾದಲ್ಲಿ ಕರ್‌ಫ್ಯೂ ರೀತಿಯ ಪರಿಸ್ಥಿತಿ ಹೇರಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next