ಶ್ರೀನಗರ:ಭದ್ರತಾ ಪಡೆಯ ಎನ್ ಕೌಂಟರ್ ಗೆ ಲಷ್ಕರ್ ಎ ತೊಯ್ಬಾದ ಇಬ್ಬರು ಉಗ್ರರು ಬಲಿಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ವಾರ್ಪೋರಾ ಗ್ರಾಮದಲ್ಲಿ ಶುಕ್ರವಾರ(ಜುಲೈ 23) ನಡೆದಿದೆ. ಈ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಟ್ವಿಟರ್ ಇಂಡಿಯಾ ಎಂಡಿಗೆ ಕರ್ನಾಟಕ ಹೈಕೋರ್ಟ್ ನಿಂದ ರಿಲೀಫ್; ಯುಪಿ ಪೊಲೀಸರ ನೋಟಿಸ್ ರದ್ದು
ಲಷ್ಕರ್ ಎ ತೊಯ್ಬಾ ಉಗ್ರಗಾಮಿ ಸಂಘಟನೆಯ ಇಬ್ಬರು ಉಗ್ರರು ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ಕಾಶ್ಮೀರದ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ವಿಜಯ್ ಕುಮಾರ್ ಎಎನ್ ಐಗೆ ಮಾಹಿತಿ ನೀಡಿದ್ದಾರೆ.
ಸಾವನ್ನಪ್ಪಿರುವ ಇಬ್ಬರು ಉಗ್ರರಲ್ಲಿ ಒಬ್ಬಾತ ಫಯಾಜ್ ವಾರ್ ಗುರುತು ಪತ್ತೆ ಹಚ್ಚಲಾಗಿದ್ದು, ಈತ ಹಲವಾರು ನಾಗರಿಕರ ಮತ್ತು ಭದ್ರತಾ ಸಿಬ್ಬಂದಿಯ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾನೆ. ಉತ್ತರ ಕಾಶ್ಮೀರದಲ್ಲಿನ ಹಿಂಸಾಚಾರದ ಕೊನೆಯ ರೂವಾರಿ ಈತನಾಗಿದ್ದಾನೆ ಎಂದು ಐಜಿಪಿ ವಿವರಿಸಿದ್ದಾರೆ.
ವಾರ್ಪೊರಾ ಗ್ರಾಮದಲ್ಲಿನ ಮನೆಯೊಂದರಲ್ಲಿ ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಮತ್ತು ಸಹಚರರು ಅಡಗಿ ಕುಳಿತಿರುವ ಮಾಹಿತಿ ಮೇರೆಗೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ ವೇಳೆ ಎನ್ ಕೌಂಟರ್ ನಡೆದಿರುವುದಾಗಿ ವರದಿ ತಿಳಿಸಿದೆ.