Advertisement

ಕೋವಿಡ್ ಪ್ರಕರಣ ಹೆಚ್ಚಳ: ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾತ್ರಿ ಕರ್ಫ್ಯೂ ಜಾರಿ

12:19 PM Nov 17, 2021 | Team Udayavani |

ಜಮ್ಮು-ಕಾಶ್ಮೀರ: ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಇಂದಿನಿಂದ(ನವೆಂಬರ್ 17) ಮತ್ತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಗುಜರಾತ್ ಮಾದರಿಯಲ್ಲಿ ರಾಜ್ಯ ಸಚಿವ ಸಂಪುಟ ಶೀಘ್ರ ಪುನಾರಚನೆ: ಬಸನಗೌಡ ಪಾಟೀಲ್ ಯತ್ನಾಳ

ರಾತ್ರಿ 10ಗಂಟೆಯಿಂದ ಬೆಳಗ್ಗೆ 6ಗಂಟೆವರೆಗೆ ಸಿಆರ್ ಪಿಸಿ ಸೆಕ್ಷನ್ 144ರ ಪ್ರಕಾರ ಕರ್ಫ್ಯೂ ಜಾರಿಗೊಳಿಸಿರುವುದಾಗಿ ಜಿಲ್ಲಾಡಳಿತ ಹೇಳಿದೆ. ಪಾಸಿಟಿವಿಟಿ ದರ ಶೇ.0.2ಕ್ಕಿಂತ ಹೆಚ್ಚಳವಾಗಿದ್ದು, ಈ ಬಗ್ಗೆ ಕೂಡಲೇ ಗಮನಹರಿಸಿ, ತುರ್ತು ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,197 ನೂತನ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 301 ಮಂದಿ ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲ 12,134 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ನವೆಂಬರ್ 17) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next