ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ LOC ಬಳಿಯ ಕೆರಾನ್ ಸೆಕ್ಟರ್ ನಲ್ಲಿ ಒಳನುಸುಳಲು ಯತ್ನಿಸಿದ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ.
ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ, ಹತ್ಯೆಗೀಡಾದ ಉಗ್ರರ ಬಳಿಯಿದ್ದ ಹಲವು ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಗ್ರರ ದಾಳಿಯಲ್ಲಿ ಹೆಚ್ಚಳ
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿವೆ. ದಕ್ಷಿಣ ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯ ವೇಳೆ ಈ ಭಯೋತ್ಪಾದಕ ದಾಳಿಗಳು ನಡೆದಿವೆ.ಜುಲೈ 8 ರಂದು, ಕಥುವಾದ ಬದ್ನೋಟಾ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಸೇನೆಯ ಮೇಲೆ ಭಾರಿ ಶಸ್ತ್ರಸಜ್ಜಿತ ಉಗ್ರರ ಗುಂಪು ಹೊಂಚುದಾಳಿ ನಡೆಸಿತ್ತು, ಇದರಲ್ಲಿ ಐದು ಸೈನಿಕರು ಹುತಾತ್ಮರಾಗಿದ್ದರು ಮತ್ತು ಎಂಟು ಸೈನಿಕರು ಗಾಯಗೊಂಡಿದ್ದರು.
ಗಡಿಯುದ್ದಕ್ಕೂ ಸೇನೆ ಹಗಲಿರುಳು ಹದ್ದಿನಕಣ್ಣು ಇರಿಸಿದೆ. ಭದ್ರತಾ ವ್ಯವಸ್ಥೆಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ. ಸೇನೆ ಭಾರೀ ಕಟ್ಟೆಚ್ಚರ ವಹಿಸಿದೆ.