Advertisement
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಶುಕ್ರವಾರ (ಆ.16) ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಜಮ್ಮು ಕಾಶ್ಮೀರ ಮತ್ತು ಹರ್ಯಾಣದ ವಿಧಾನಸಭೆ ಚುನಾವಣೆಯನ್ನು ಘೋಷಿಸಿದರು.
Related Articles
Advertisement
ಮತ ಎಣಿಕೆ: ಅ.04
ಮೊದಲ ಹಂತದಲ್ಲಿ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದರೆ, ಎರಡನೇ ಹಂತದಲ್ಲಿ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಮೂರನೇ ಹಂತದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಹರ್ಯಾಣದಲ್ಲಿ ಒಂದೇ ಹಂತ
ಇದೇ ಸಮಯದಲ್ಲಿ 90 ವಿಧಾನಸಭಾ ಕ್ಷೇತ್ರಗಳಿರುವ ಹರ್ಯಾಣದ ವಿಧಾನಸಭಾ ಚುನಾವಣೆಯನ್ನೂ ಘೋಷಿಸಲಾಗಿದೆ. ಇಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸೆ.12ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ಸೆ.16ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದೆ. ಅ.4ರಂದು ಮತ ಎಣಿಕೆ ನಡೆಯಲಿದೆ.