Advertisement

Assembly Election: ಜಮ್ಮು ಕಾಶ್ಮೀರ, ಹರ್ಯಾಣ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ

03:44 PM Aug 16, 2024 | Team Udayavani |

ಹೊಸದಿಲ್ಲಿ: 2018ರಲ್ಲಿ ವಿಧಾನಸಭೆ ವಿಸರ್ಜನೆಯಾದ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದಲ್ಲಿ (Jammu Kashmir) ವಿಧಾನಸಭೆ ಚುನಾವಣೆ (Assembly Election) ನಡೆಯಲಿದೆ. ರಾಷ್ಟ್ರೀಯ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು, ಜಮ್ಮು ಕಾಶ್ಮೀರದಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ.

Advertisement

ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಶುಕ್ರವಾರ (ಆ.16) ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಜಮ್ಮು ಕಾಶ್ಮೀರ ಮತ್ತು ಹರ್ಯಾಣದ ವಿಧಾನಸಭೆ ಚುನಾವಣೆಯನ್ನು ಘೋಷಿಸಿದರು.

ಮೊದಲ ಹಂತದ ಮತದಾನ: ಸೆ.18

ಎರಡನೇ ಹಂತದ ಮತದಾನ: ಸೆ.25

ಮೂರನೇ ಹಂತದ ಮತದಾನ: ಅ.01

Advertisement

ಮತ ಎಣಿಕೆ: ಅ.04

ಮೊದಲ ಹಂತದಲ್ಲಿ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದರೆ, ಎರಡನೇ ಹಂತದಲ್ಲಿ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಮೂರನೇ ಹಂತದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಹರ್ಯಾಣದಲ್ಲಿ ಒಂದೇ ಹಂತ

ಇದೇ ಸಮಯದಲ್ಲಿ 90 ವಿಧಾನಸಭಾ ಕ್ಷೇತ್ರಗಳಿರುವ ಹರ್ಯಾಣದ ವಿಧಾನಸಭಾ ಚುನಾವಣೆಯನ್ನೂ ಘೋಷಿಸಲಾಗಿದೆ. ಇಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸೆ.12ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ಸೆ.16ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್‌ 1ರಂದು ಮತದಾನ ನಡೆಯಲಿದೆ. ಅ.4ರಂದು ಮತ ಎಣಿಕೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next