Advertisement

Jammu Kashmir: ಮುಂದಿನ ವಾರದಿಂದ ಕಾಶ್ಮೀರದಲ್ಲಿ ಮೋದಿ, ಅಮಿತ್‌ ಶಾ ಪ್ರಚಾರ ಶುರು

01:25 AM Aug 19, 2024 | Team Udayavani |

ಹೊಸದಿಲ್ಲಿ: ಸುಮಾರು 10 ವರ್ಷಗಳ ಬಳಿಕ ನಡೆಯುತ್ತಿರುವ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಗೆ ಬಿಜೆಪಿ ಮುಂದಿನ ವಾರದಿಂದಲೇ ಪ್ರಚಾರ ಆರಂಭಿಸಲಿದೆ.

Advertisement

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣ ಸಚಿವ ರಾಜನಾಥ್‌ ಸಿಂಗ್‌, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸರಣಿ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಬಿಜೆಪಿ ಶೇ.80 ಹೊಸ ಮುಖಗಳಿಗೆ ಅವಕಾಶ ನೀಡಲಿದೆ ಎನ್ನಲಾಗಿದೆ. 370ನೇ ವಿಧಿ ರದ್ದತಿ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಬಿಜೆಪಿ ಅಧಿಕಾರ ಹಿಡಿಯಲು ಸಕಲ ಪ್ರಯತ್ನ ನಡೆಸುತ್ತಿದೆ.

ಚುನಾವಣ ಪೂರ್ವ ಮೈತ್ರಿ ಇಲ್ಲ: ಜಮ್ಮು-ಕಾಶ್ಮೀರ ದಲ್ಲಿ ಬಿಜೆಪಿ ಯಾವುದೇ ಚುನಾವಣ ಪೂರ್ವ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯಾಧ್ಯಕ್ಷ ರವೀಂದರ್‌ ರೈನಾ ಹೇಳಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ಉದ್ದೇಶಿಸಿರುವ 8-10 ಮಂದಿ ಜತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಜುಲ್ಫೀಕರ್‌ ಬಿಜೆಪಿಗೆ
ಕಣಿವೆ ರಾಜ್ಯದಲ್ಲಿ ಸಾಕಷ್ಟು ಹೆಸರು ಮಾಡಿರುವ ಪಿಡಿಪಿ ನಾಯ ಕ, ಮಾಜಿ ಸಚಿವ ಚೌಧರಿ ಜುಲ್ಫೀಕರ್‌ ಅಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next