Advertisement
ಸೋಮವಾರ ಪರಿಷ್ಕೃತ ಪಟ್ಟಿಯಲ್ಲಿ 15 ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. ಇದೀಗ ಮತ್ತೆ 29 ಮಂದಿ ಅಭ್ಯರ್ಥಿಗಳ ಹೆಸರು ಬಿಡುಗಡೆ ಮಾಡಲಾಗಿದೆ. ಹೀಗಾಗಿ 90 ವಿಧಾನಸಭೆ ಕ್ಷೇತ್ರಗಳ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ 44 ಹೆಸರು ಅಂತಿಮಗೊಳಿಸಿದೆ.
Related Articles
Advertisement
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮುಂದಿನ ಸರ್ಕಾರ ರಚಿಸುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಚುನಾವಣಾ ಪೂರ್ವ ಮೈತ್ರಿಯು ತಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಂಗಳವಾರ ಹೇಳಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಜತೆಗಿನ ಮೈತ್ರಿಯ ಬಳಿಕ ಕಾಂಗ್ರೆಸ್ ಏಳು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಸೋಮವಾರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು 18 ಮಂದಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು.