Advertisement

ಪಾಕ್ ನಿಂದ ಅಪ್ರಚೋದಿತ ಗುಂಡಿನ ದಾಳಿ: ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮ

08:17 AM May 03, 2020 | Mithun PG |

ಜಮ್ಮು-ಕಾಶ್ಮೀರ: ಪಾಕ್ ಮತ್ತೆ ತನ್ನ  ಕುತಂತ್ರ ಬುದ್ದಿ ಮೆರೆದಿದ್ದು ಶುಕ್ರವಾರ ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಎನ್ ಡಿ ಟಿವಿ ವರದಿ ಮಾಡಿದೆ.

Advertisement

ಶುಕ್ರವಾರ ರಾಂಪುರದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಗುಂಡಿನ ದಾಳಿ ನಡೆಸಿತ್ತು. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಸೈನಿಕರು ಇಂದು ಹುತಾತ್ಮರಾಗಿದ್ದಾರೆ. ಮತ್ತೋರ್ವ ಯೋಧ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ರಾಂಪುರ ಸೆಕ್ಟರ್ ನಲ್ಲಿ  ಶುಕ್ರವಾರ ಮಧ್ಯಾಹ್ನ 3:30 ರ ಸುಮಾರಿಗೆ ಪಾಕಿಸ್ಥಾನ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆಯೂ ಕೂಡ ತಕ್ಕ ಪ್ರತ್ಯುತ್ತರ ನೀಡಿತ್ತು ಎಂದು ಭದ್ರತಾ ಪಡೆ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಕ್ಕೂ ಮೊದಲು ಏಪ್ರಿಲ್ 30 ರಂದು ಪಾಕಿಸ್ತಾನವು ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ  ದಾಳಿ ನಡೆಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next