Advertisement

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

09:06 AM Apr 05, 2020 | Mithun PG |

ಜಮ್ಮು-ಕಾಶ್ಮೀರ: ಇಂದು ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆಂದು ಎಎನ್ ಐ ವರದಿ ಮಾಡಿದೆ.

Advertisement

ಪೊಲೀಸರು ಮತ್ತು ಭದ್ರತಾ ಪಡೆಗಳು ಕುಲ್ಗಾಂ ಜಿಲ್ಲೆಯಲ್ಲಿ  ಜಂಟಿ ಕಾರ್ಯಾಚರಣೆ ನಡೆಸಿದ್ದು, ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದರಿಂದ ಎನ್ ಕೌಂಟರ್ ಮೂಲಕ ಹತ್ಯೆಗೈಯಲಾಗಿದೆ. ಕೆಲಹೊತ್ತು ಗುಂಡಿನ ಚಕಮಕಿ ನಡೆದಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು ಉಳಿದಿರುವ ಉಗ್ರರಿಗಾಗಿ ಶೋಧ ಕಾರ್ಯ ನಡೆಡಸಲಾಗುತ್ತಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next