Advertisement
ಬಾರಾಮುಲ್ಲಾ ಜಿಲ್ಲೆಯ ಪಟ್ಟಾನ್ ಪ್ರದೇಶದ ಛಕ್ ಟೇಪರ್ ಕ್ರೀರಿಯಲ್ಲಿ ಶನಿವಾರ ಬೆಳಗ್ಗೆ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಶುಕ್ರವಾರ ರಾತ್ರಿ ಕಥುವಾದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಸೇನೆಯ ರೈಸಿಂಗ್ ಸ್ಟಾರ್ ಕಾರ್ಪ್Õ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಅಲ್ಲದೇ ಎನ್ ಕೌಂಟರ್ ನಡೆದ ಸ್ಥಳ ದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದವು. ಚುನಾವಣೆ ಹೊಸ್ತಿಲಲ್ಲಿರುವ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೋದಿ ರ್ಯಾಲಿಗೆ ಕೆಲವೇ ಗಂಟೆಗಳ ಮುನ್ನ ಈ ಎನ್‌ಕೌಂಟರ್‌ಗಳು ನಡೆದಿವೆ.
ರಜೌರಿ: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿನ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಒಳನುಸುಳಲು ಯತ್ನಿಸಿದ ಉಗ್ರರನ್ನು ಭದ್ರತಾ ಪಡೆ ಸಿಬಂದಿ ಹಿಮ್ಮೆಟ್ಟಿಸಿದ್ದಾರೆ. ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಭಯೋತ್ಪಾದಕರು ಒಳನುಸುಳಲು ಯತ್ನಿಸುತ್ತಿ ರುವ ಬಗ್ಗೆ ಗುಪ್ತಚರ ಮೂಲಗಳಿಂದ ಖಚಿತ ಮಾಹಿತಿ ಸಿಕ್ಕಿದ್ದ ಹಿನ್ನಲೆಯಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ವೇಳೆ ಭದ್ರತಾ ಸಿಬಂದಿ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಉಗ್ರರನ್ನು ಹಿಮ್ಮೆಟ್ಟಿಸಲಾಗಿದೆ. ಇದೇ ವೇಳೆ ಉಗ್ರರು ನಡೆಸಿದ ಗುಂಡಿನ ದಾಳಿ ಯಲ್ಲಿ ಯೋಧರೊಬ್ಬರು ಗಾಯಗೊಂಡಿದ್ದಾರೆ. ನೌಶೇರಾದಲ್ಲಿ ಕಳೆದ 1ವಾರದಲ್ಲಿ 2 ಬಾರಿ ಒಳ ನುಸುಳುವ ಪ್ರಯತ್ನಗಳು ನಡೆಸಿದ್ದು, ಸೆ.9ರಂದು ಇಬ್ಬರು ಉಗ್ರರನ್ನು ಭದ್ರತಾ ಪಡೆ ಕೊಂದಿದ್ದವು.