Advertisement

ಜಮ್ಮು ಕಾಶ್ಮೀರದ ಹಿರಿಯ ಐಪಿಎಸ್​ ಅಧಿಕಾರಿ ಹೇಮಂತ್‌ ಕುಮಾರ್ ಲೋಹಿಯಾ ಹತ್ಯೆ

10:52 AM Oct 04, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾರಾಗೃಹ ಇಲಾಖೆಯ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಅವರು ಅಕ್ಟೋಬರ್‌ 3ರ ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಕತ್ತು ಸೀಳಿದ ರೀತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಮೃತದೇಹದ ಮೇಲೆ ಸುಟ್ಟ ಗಾಯಗಳು ಕಂಡು ಬಂದಿದೆ. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಈ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.

ಈತ ಮೂಲತಃ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಗೆ ಸೇರಿದ ಯಾಸಿರ್ ಎಂದು ಗುರುತಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿರುವಾಗಲೇ ಈ ಕೊಲೆ ನಡೆದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next