Advertisement
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.15ರಿಂದ ಕಾಮಗಾರಿ ಆರಂಭವಾಗಿ ಮೂರು ತಿಂಗಳಲ್ಲಿಮುಗಿಯಲಿದೆ. ಈ ಅವಧಿಯಲ್ಲಿ ಆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು ಎಂದರು. ಶಿರಾಡಿ ಘಾಟ್‌ನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಲೂ ಮಾತುಕತೆ ಮುಂದುವರಿದಿದೆ. ಸುಮಾರು 15 ಸಾವಿರ ಕೋಟಿ ರೂ. ವೆಚ್ಚದ ಸುರಂಗ ರಸ್ತೆ ನಿರ್ಮಾಣಕ್ಕೆ ನೆರವು ನೀಡಲು ಜೈಕಾ ಬ್ಯಾಂಕ್ ಮುಂದೆ ಬಂದಿದೆ. ಆದರೆ, ಇದು ಪರಿಸರ ಸ್ನೇಹಿ ಸುರಂಗ ರಸ್ತೆಯಾಗಿಸಲು
ಪರಿಸರ ಇಲಾಖೆ ಜತೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.