ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ತಾಂತ್ರಿಕೇತರ ವಾಣಿಜ್ಯ ತೆರಿಗೆ ಪರಿವೀಕ್ಷಕ 230 ಹುದ್ದೆಗಳ ನೇಮಕಾತಿ ಸಂಬಂಧ ಜ.21ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.
Advertisement
ರಾಜ್ಯದ ಬೆಂಗಳೂರು, ಬೆಳಗಾವಿ. ಬಳ್ಳಾರಿ,ಬಾಗಲಕೋಟೆ, ವಿಜಯಪುರ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ಗದಗ, ಚಿತ್ರದುರ್ಗ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಮಂಗಳೂರು, ಕಾರವಾರ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು, ವಿಜಯನಗರ, ಮೈಸೂರು, ಚಾಮರಾಜನಗರ, ರಾಮ ನಗರ,ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ. ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್ -1 (50 ಅಂಕ) ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರ ವರೆಗೆ ಪೇಪರ್ -2ಕ್ಕೆ (150 ಅಂಕ) ಪರೀಕ್ಷೆ ನಡೆಯಲಿದೆ.