Advertisement
ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷದಿಂದ ರಾಜ್ಯವ್ಯಾಪಿ ಇದೇ ಜನವರಿ 26ರಿಂದ ‘ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
Related Articles
Advertisement
ಇದನ್ನೂ ಓದಿ:ಅಣ್ಣಾ ಎನ್ನುವುದು ಬೇಡ ಅಂದರೆ ಸಾಹೇಬರೇ ಎನ್ನುತ್ತೇನೆ: ಕುಮಾರಸ್ವಾಮಿಗೆ ಡಿಕೆಶಿ
ಕೋವಿಡ್ ಮುನ್ನೆಚ್ಚರಿಕೆ ವಹಿಸುತ್ತೇವೆ:ನಮಗೆ ಧಾವಂತವಿಲ್ಲ. ವೈರಸ್ ನಿಯಂತ್ರಣಕ್ಕೆ ಸರ್ಕಾರ ಜಾರಿ ಮಾಡುವ ಎÇÉಾ ನಿಯಮಗಳಿಗೆ ಬದ್ಧರಾಗಿ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ. ಕಾಂಗ್ರೆಸ್ ನಾಯಕರಂತೆ ಅನುಮತಿ ಕೊಡದಿದ್ದರೆ ಪ್ರಾಣ ಬಿಡುತ್ತೇವೆ ಎಂದು ನಾವು ಬೆದರಿಕೆ ಹಾಕುವುದಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು. ಜ.26ರಿಂದ ಜಲಧಾರೆ ಆರಂಭ:
ಜನವರಿ 26ರಂದು ಇಷ್ಟೂ ವಾಹನಗಳಲ್ಲಿ ಅಳವಡಿಸಲಾಗಿರುವ ಕಲಶಗಳ ಮೂಲಕ ಪೂರ್ವ ನಿಗದಿ ಮಾಡಲಾಗಿರುವ ಸ್ಥಳಗಳಲ್ಲಿ ಬೆಳಗ್ಗೆ 9 ಗಂಟೆಗೆ ಕಾವೇರಿ, ಕಬಿನಿ, ಮೇಕೆದಾಟು, ಹೇಮಾವತಿ, ನೇತ್ರಾವತಿ, ಕುಮಾರಧಾರ, ತುಂಗಭದ್ರಾ, ಶರಾವತಿ, ಅಘನಾಶಿನಿ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಭೀಮಾ, ಅರ್ಕಾವತಿ, ಉತ್ತರ ಪಿನಾಕಿನಿ, ಚಿತ್ರಾವತಿ ಸೇರಿ 15 ಸ್ಥಳಗಳಲ್ಲಿ ಮೊದಲ ದಿನ ಜಲ ಸಂಗ್ರಹ ಮಾಡಲಾಗುವುದು. ಇಡೀ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 51 ಸ್ಥಳಗಳಲ್ಲಿ ಪವಿತ್ರ ನದಿಗಳ ಜಲ ಸಂಗ್ರಹ ಮಾಡಲಾಗುವುದು. ರಾಜ್ಯದ 180 ವಿಧಾನಸಭೆ ಕ್ಷೇತ್ರಗಳು, 140 ತಾಲ್ಲೂಕು ಕೇಂದ್ರಗಳಲ್ಲಿ ಈ ಕಲಶಗಳು ಹಾದು ಹೋಗಲಿದ್ದು, ಎÇÉೆಡೆ ಜಲ ತುಂಬಿದ ಕಲಶಗಳ ಮೆರೆವಣಿಗೆ, ಕಲಾ ತಂಡಗಳ ಮೆರಗು, ಮಂಗಳವಾದ್ಯಗಳ ಮೇಳ, ಕಲಶಗಳೊಂದಿಗೆ ಮಹಿಳೆಯರ ನಡಿಗೆ ನಡೆಯಲಿದೆ. ದಿನಂಪ್ರತಿ 15 ಕಡೆ ಇಂಥ ಕಾರ್ಯಕ್ರಮಗಳು ನಡೆಯಲಿವೆ. ಎಲ್ಲಾ ಗಂಗಾ ರಥ ವಾಹನಗಳು 15-20ದಿನಗಳಲ್ಲಿ ಬೆಂಗಳೂರು ತಲುಪಲಿದ್ದು, ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲಾಗುವುದು ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು. ವರ್ಷವಿಡೀ ಗಂಗಾ ಪೂಜೆ:
ಜನತಾ ಜಲಧಾರೆಯ ಸಮಾರೋಪ ಕಾರ್ಯಕ್ರಮ ಮುಗಿದ ನಂತರ ಪೂಜಿಸಲ್ಪಟ್ಟಿದ್ದ ಪವಿತ್ರ ಜಲವುಳ್ಳ ಕಲಶವನ್ನು ಬೆಂಗಳೂರಿನ ವಿವಿಧೆಡೆಗಳಿಂದ ಮೆರವಣಿಗೆ ಮೂಲಕ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆ ವಿದ್ಯುಕ್ತವಾಗಿ ಬರ ಮಾಡಿಕೊಂಡು ಆ ಕಲಶ ಪ್ರತಿಷ್ಠಾಪನೆ ಮಾಡಲಾಗುವುದು. ಅಂದಿನಿಂದ ವರ್ಷವಿಡಿ ಗಂಗಾ ಪೂಜೆ, ಗಂಗಾ ಆರತಿ ನಿರಂತರವಾಗಿ ನಡೆಯಲಿದೆ. ಆ ನಿತ್ಯ ಪೂಜೆಯಲ್ಲಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದರು.