Advertisement
ದ.ಕ. ಮತ್ತು ಉಡುಪಿ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್, ಸಂಸದರಾದ ಶೋಭಾ ಕರಂದ್ಲಾಜೆ, ಅನಂತ್ ಕುಮಾರ್, ಪ್ರತಾಪ ಸಿಂಹ ಮತ್ತು ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸಚಿವರು ಭಾಗವಹಿಸಲಿದ್ದಾರೆ. ಪ್ರತೀ ಕ್ಷೇತ್ರದ ಬೂತ್ ಮಟ್ಟದಿಂದ ಸ್ಥಳೀಯರೇ ಸಮಾವೇಶದಲ್ಲಿ ಭಾಗವಹಿಸಲು ವಾಹನದ ವ್ಯವಸ್ಥೆ ಮಾಡಿದ್ದಾರೆ ಎಂದು ಬಿಜೆಪಿ ಪ್ರಕಟನೆ ತಿಳಿಸಿದೆ.
ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ಸಾರ್ವಜನಿಕರ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಸಂಚಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಪೊಲೀಸ್ ಇಲಾಖೆಯು ಮಾರ್ಗ ಸೂಚಿಯನ್ನು ರಚಿಸಿದೆ. ಇದೇ ಸಂದರ್ಭದಲ್ಲಿ ನಗರದ ಬಸ್, ಟ್ಯಾಕ್ಸಿ ಮತ್ತು ಆಟೋ ಚಾಲಕರ ಸಂಘದ ಸದಸ್ಯರು ಬೆಂಬಲ ನೀಡಲಿದ್ದು, ವ್ಯಾಪಾರಸ್ಥರು ಸ್ವಯಂ ಪ್ರೇರಿತರಾಗಿ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ಸಾರ್ವಜನಿಕರಿಗೆ ಏನಾದರೂ ಗೊಂದಲಗಳಿದ್ದಲ್ಲಿ ಸಮಾವೇಶದಲ್ಲಿ ಪಾಲ್ಗೊಂಡು ಮಾಹಿತಿ ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.