ಬೆಂಗಳೂರು: ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು 2022ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಶುಲ್ಕ ಪಾವತಿಸುವ ಅವಧಿಯನ್ನು ಜ.31ರ ವರೆಗೆ ವಿಸ್ತರಿಸಿದೆ.
ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿರುವ ವಿದ್ಯಾರ್ಥಿಗಳಿಗೆ 700 ರೂ. ದಂಡಶುಲ್ಕದೊಂದಿಗೆ ಜ.7ರ ವರೆಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ, ಪೋಷಕರು ಹಾಗೂ ವಿದ್ಯಾರ್ಥಿಗಳ ಮನವಿ ಮೇರೆಗೆ ಜ.31ರ ವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
1,200 ರೂ.ಗಳ ದಂಡಶುಲ್ಕ ಮತ್ತು 1,320 ವಿಶೇಷ ದಂಡಶುಲ್ಕದೊಂದಿಗೆ ಜ.31ರೊಳಗೆ ಪಾವತಿ ಮಾಡಬಹುದು. ಕಾಲೇಜಿನವರು ಶುಲ್ಕವನ್ನು ಖಜಾನೆಗೆ ಸಂದಾಯ ಮಾಡಲು ಹಾಗೂ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಲು ಫೆ.2 ಕೊನೆಯ ದಿನವಾಗಿದೆ.
ಇದನ್ನೂ ಓದಿ:35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ
ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಲು ಫೆ.4 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳ ಮಾಹಿತಿ, ಮೂಲ ಚಲನ್ ಮತ್ತು ಚೆಕ್ ಲಿಸ್ಟ್ ಅನ್ನು ಕೇಂದ್ರ ಕಚೇರಿಗೆ ಸಲ್ಲಿಸಲು ಫೆ.7 ಕೊನೆಯ ದಿನವಾಗಿದೆ ಎಂದು ಪಿಯು ಇಲಾಖೆ ಪ್ರಕಟಣೆ ತಿಳಿಸಿದೆ.