Advertisement

ಜ.4: ಮಂದಿರ ಅರ್ಜಿ ವಿಚಾರಣೆ

06:00 AM Dec 25, 2018 | |

ನವದೆಹಲಿ/ಪಂಡರಾಪುರ: ಅಯೋಧ್ಯೆಯಲ್ಲಿನ ರಾಮ ಜನ್ಮಭೂಮಿ ಯಾರಿಗೆ ಸೇರಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್‌ ಜ.4ರಂದು ವಿಚಾರಣೆ ನಡೆಸಲಿದೆ. 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ 2.77 ಎಕರೆ ಜಮೀನನ್ನು ಮೂರು ಭಾಗಗಳಾಗಿ ಹಂಚಿಕೆ ಮಾಡಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಒಟ್ಟು 14 ಅರ್ಜಿಗಳ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳಿರುವ ನ್ಯಾಯಪೀಠ ರಚಿಸುವ ಸಾಧ್ಯತೆ ಇದೆ. ಅಕ್ಟೋಬರ್‌ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ ಜನವರಿಯಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿತ್ತು.
 

Advertisement
Advertisement

Udayavani is now on Telegram. Click here to join our channel and stay updated with the latest news.

Next