Advertisement

ಜ. 6ರಂದು ಮಹಿಳಾ ಕಾಂಗ್ರೆಸ್‌ ಸಮಾವೇಶ; ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ

10:18 PM Jan 03, 2023 | Team Udayavani |

ಬೆಂಗಳೂರು: ಭಾರತ್‌ ಜೋಡೊ ಯಾತ್ರೆಯಲ್ಲಿ ಭಾಗವಹಿಸಬೇಕಿದ್ದ ಪ್ರಿಯಾಂಕಾ ಗಾಂಧಿ ಅವರು “ನಾ ನಾಯಕಿ’ ಮಹಿಳಾ ಕಾಂಗ್ರೆಸ್‌ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಕ್ಕೆ ಆಗಮಿಸಲಿದ್ದಾರೆ.

Advertisement

ಜ. 6ರಂದು ಅರಮನೆ ಮೈದಾನದಲ್ಲಿ ಆಯೋಜಿಸಿರುವ “ನಾ ನಾಯಕಿ’ ಮಹಿಳಾ ಕಾಂಗ್ರೆಸ್‌ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ಭಾಗವಹಿಸಲಿದ್ದು, ಕೆಪಿಸಿಸಿ ಕಚೇರಿಗೂ ಭೇಟಿ ನೀಡಲಿದ್ದಾರೆ.

ಇಡೀ ದಿನ ರಾಜ್ಯ ಕಾಂಗ್ರೆಸ್‌ ನಾಯಕರ ಜತೆ ಸಮಾಲೋಚನೆ ನಡೆಸಲಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಕುತೂಹಲ ಮೂಡಿಸಿದೆ. ಮಹಿಳೆಯರನ್ನು ಸ್ವಾವಲಂಬಿಯಾಗಿಸುವ ಜತೆಗೆ ನಾಯಕತ್ವ ಕೊಡುವ ದೃಷ್ಟಿಯಿಂದ “ನಾ ನಾಯಕಿ’ ಅಭಿಯಾನವನ್ನು ಕೆಪಿಸಿಸಿ ಕೈಗೊಂಡಿದೆ.

ಸಮಾಜದ ಎಲ್ಲ ಸ್ಥರಗಳ ಮಹಿಳೆಯರಿಗೆ ಸ್ಥಾನಮಾನ ನೀಡುವುದರ ಜತೆಗೆ ಅವರೇ ಸ್ವಯಂ ನಾಯಕಿಯಾಗುವ ಅವಕಾಶ ಕಲ್ಪಿಸುವುದು. ಅದೇ ಕಾರಣಕ್ಕೆ “ನಾ ನಾಯಕಿ’ ಹೆಸರು ನೀಡಲಾಗಿತ್ತು. ಬೂತ್‌ ಮಟ್ಟದಿಂದ ತಾಲೂಕು, ಜಿಲ್ಲಾ ಮಟ್ಟದವರೆಗೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಇದೀಗ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next