Advertisement
ವಿಜಯನಗರ ಜಿಲ್ಲೆಯ ಹೊಸಪೇಟೆಯ ಡಾ| ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣ ದಲ್ಲಿ ಬುಧವಾರ ಜರಗಿದ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಮಕ್ಕಳ ಶಿಕ್ಷಣಕ್ಕೆ ಭಯವಿಲ್ಲ. ನಮ್ಮ ಸರಕಾರ ರೈತ ಕೂಲಿ ಕಾರ್ಮಿಕರಿಗೆ, ನೇಕಾರರು, ಮೀನುಗಾರರು, ಟ್ಯಾಕ್ಸಿ ಹಾಗೂ ಆಟೋ ಚಾಲಕರ ಮಕ್ಕ ಳಿಗೂ ವಿದ್ಯಾನಿಧಿ ಕೊಡುತ್ತಿದೆ. ಗ್ರಾಮೀಣ ಪ್ರದೇಶದಲ್ಲಿರುವ ಬಡಿಗರು, ಕಮ್ಮಾರರು, ವಿಶ್ವಕರ್ಮರು, ಮೇದಾ ರರು ಸಹಿತ ಕುಶಲ ಕರ್ಮಿಗಳಿಗೆ 50 ಸಾವಿರ ರೂ. ಧನಸಹಾಯ ನೀಡಲಾಗುತ್ತಿದೆ. ಜಗಜೀವನರಾಂ ಹೆಸರಿನಲ್ಲಿ 100 ಯುವಕರಿಗೆ ಸ್ವಯಂ ಉದ್ಯೋಗ, ಸ್ತ್ರೀಶಕ್ತಿ ಸಂಘಗಳಿಗೆ ಸ್ತ್ರೀ ಸಾಮರ್ಥ್ಯ ಯೋಜನೆಯಡಿ 5 ಲಕ್ಷ ಮಹಿಳೆಯರಿಗೆ ಉದ್ಯೋಗ, ಯುವಕರ ಸಂಘಕ್ಕೆ ಆರ್ಥಿಕ ನೆರವು ನೀಡಿ, ಉತ್ಪಾದನೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ 5 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ ಎಂದರು.
ದೀನದಲಿತರು, ವಿದ್ಯಾರ್ಥಿಗಳು, ಮಹಿಳೆಯರು, ಯುವಕರಿಗೆ ಭಯವಿಲ್ಲ. ಎಸ್ಸಿ, ಎಸ್ಟಿ ಸಮುದಾಯ ವರಿಗೆ ಮೀಸಲಾತಿ ಹೆಚ್ಚಳ ಮಾಡುವ ಬೇಡಿಕೆ ಇದ್ದರೂ ನೀವು ನಿರ್ಧಾರ ಮಾಡಿಲ್ಲ. ನಾವು ನಿರ್ಧಾರ ಮಾಡಿದರೆ ಅದನ್ನು ಪ್ರಶ್ನಿಸುತ್ತೀರಿ. ನಮಗೂ ಕಾನೂನು ಗೊತ್ತಿದೆ. ಈ ಸಮುದಾಯಕ್ಕೆ ನ್ಯಾಯ ಕೊಡಿಸಲು ನಾನು ನಿಲ್ಲುತ್ತೇನೆ ಎಂದರು. ಧರ್ಮ ಒಡೆಯುವ ಭೀತಿ ಇಲ್ಲ
ಬಿಜೆಪಿ ಸರಕಾರದಲ್ಲಿ ದೀನ ದಲಿತರು ಭಯಭೀತರಾಗಿದ್ದಾರೆ ಅಂತ ಹೇಳಿದ್ದಿರಿ. ಆದರೆ ನೀವು ವೀರಶೈವ ಲಿಂಗಾಯತ ಸಮುದಾಯ ಒಡೆಯುವ ಪ್ರಯತ್ನ ಮಾಡಿದ್ದಿರಿ. ಆಗ ಜನರಿಗೆ ಭಯ ಇತ್ತು. ನಾವು ವೀರಶೈವ ಲಿಂಗಾಯತರನ್ನು ಒಂದಾಗುವಂತೆ ಮಾಡಿದ್ದೇವೆ. ನಿಮ್ಮ ಕಾಲದಲ್ಲಿ ಕೊಲೆಗಳು ನಡೆಯುತ್ತಿದ್ದವು, ಜನರು ಭಯಭೀತರಾಗಿದ್ದರು. ಆ ಭಯ ಈಗ ಇಲ್ಲ ಎಂದರು.
Related Articles
ಪ್ರಧಾನಿ ನರೇಂದ್ರ ಮೋದಿ ಏಕ್ ಭಾರತ್ ಶ್ರೇಷ್ಠ ಭಾರತ್ ಎಂದು ಹೇಳಿದ್ದಾರೆ. ಅವರ ನಾಯಕತ್ವದಲ್ಲಿ ದೇಶ ಮುನ್ನಡೆಯಲು ಜನ ಬಯಸಿದ್ದಾರೆ. ಕೇಂದ್ರ, ರಾಜ್ಯ ಸರಕಾರಗಳ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು, ನವಕರ್ನಾಟಕ ನಿರ್ಮಾಣಕ್ಕಾಗಿ ನಿಮ್ಮೆಲ್ಲರ ಆಶೀರ್ವಾದವನ್ನು ಕೋರುತ್ತೇನೆ ಎಂದು ಹೇಳಿದರು.
Advertisement
ಮಾಜಿ ಸಿಎಂ ಯಡಿಯೂರಪ್ಪ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ ಸಿಂಗ್, ಗೋವಿಂದ ಕಾರಜೋಳ, ಶ್ರೀರಾಮುಲು, ಹಾಲಪ್ಪ ಆಚಾರ್, ಸಂಸದರಾದ ವೈ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಶಶೀಲ್ ನಮೋಶಿ, ಶಾಸಕರಾದ ಎನ್.ವೈ. ಗೋಪಾಲಕೃಷ್ಣ, ರಾಜುಗೌಡ, ಬಸವರಾಜ ಧಡೇಸುಗೂರು ಮೊದಲಾದವರು ಉಪಸ್ಥಿತರಿದ್ದರು.
ದಲಿತರ ಮನೆಯಲ್ಲಿ ಉಪಾಹಾರಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರು ತಾಲೂಕಿನ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲನಿಯ ದಲಿತ ಕುಟುಂಬದ ಹಿರಾಳ ಕೊಲ್ಲಾರಪ್ಪರ ಮನೆಯಲ್ಲಿ ಉಪಾಹಾರ ಸೇವಿಸಿದರು. ಹೊಸಪೇಟೆ ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೂ ಮುನ್ನ ಕಮಲಾಪುರ ದಲಿತ ಕೇರಿ ಹೊಸಪೇಟೆ ಏಳು ಕೇರಿಗೆ ಭೇಟಿ ನೀಡಿ ವಾಲ್ಮೀಕಿ ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್, ಶಾಸಕ ರಾಜು ಗೌಡ ಉಪಸ್ಥಿತರಿದ್ದರು.