Advertisement
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ , ಜಗದೀಶ್ ಶೆಟ್ಟರ್ ಹಾಗೂ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ನಾಲ್ಕು ತಂಡಗಳು ಜನಸ್ವರಾಜ್ ಯಾತ್ರೆ ನಡೆಸಲಿವೆ.
Related Articles
Advertisement
ಇದನ್ನೂ ಓದಿ:ಕಾಂಗ್ರೆಸ್ ಇರುವ ರಾಜ್ಯಗಳಲ್ಲಿ ಇಂಧನ ಬೆಲೆ ಇಳಿಕೆ ಆಗಿದೆಯಾ: ಪ್ರಹ್ಲಾದ ಜೋಶಿ
ಕೆ.ಎಸ್. ಈಶ್ವರಪ್ಪ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಹಾಲಪ್ಪ ಆಚಾರ್, ಎಸ್.ಅಂಗಾರ, ಶಾಸಕ ಅರವಿಂದ ಲಿಂಬಾವಳಿ, ರಾಜ್ಯ ಉಪಾಧ್ಯಕ್ಷ ಎಂ.ಶಂಕರಪ್ಪ ಇರಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಪ್ರವಾಸ ಮಾಡಲಿದ್ದಾರೆ. ಅಶ್ವತ್ಥನಾರಾಯಣ ಸಂಚಾಲಕರಾಗಿದ್ದು, ವಿನಯ್ ಬಿದರೆ ಸಹ ಸಂಚಾಲಕರಾಗಿದ್ದಾರೆ.
ಜಗದೀಶ್ ಶೆಟ್ಟರ್ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವರಾದ ಡಾ.ಅಶ್ವತ್ಥನಾರಾಯಣ, ಬೈರತಿ ಬಸವರಾಜ್, ಗೋಪಾಲಯ್ಯ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಂ.ರಾಜೇಂದ್ರ ಇರಲಿದ್ದು, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಸಂಚಾಲಕರಾಗಿ ಮಹೇಶ್ ಟೆಂಗಿನಕಾಯಿ, ಮುನಿರಾಜು ಗೌಡ ಸಹ ಸಂಚಾಲಕರಾಗಿದ್ದಾರೆ.
ಮಂಗಳವಾರ ರಾಜ್ಯ ಪದಾಧಿಕಾರಿಗಳ ಸಭೆರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು ಮಂಗಳವಾರ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪದಾಧಿಕಾರಿಗಳ ಸಭೆಯಲ್ಲಿ ಉಪ ಚುನಾವಣೆ ಫಲಿತಾಂಶ ಆತ್ಮಾವಲೋಕನ, “ಜನಸ್ವರಾಜ್’ ಯಾತ್ರೆಯ ರೂಪು-ರೇಷೆ, ಪ್ರವಾಸ ಸಂದರ್ಭದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳು ಚರ್ಚೆಯಾಗಲಿವೆ ಎಂದು ಹೇಳಲಾಗಿದೆ.