ಬಂಟ್ವಾಳ : ಗಣಿ ಉದ್ಯಮಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ತಮ್ಮ ಉದ್ಯಮ ಸ್ನೇಹಿತರೊಂದಿಗೆ ಮಂಗಳವಾರ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ, 26 ಲಕ್ಷ ರೂಪಾಯಿ ದೇಣಿಗೆಯನ್ನು ನೀಡಿದರು.
ಶಾಲಾಡಳಿತ ಮಂಡಳಿಯ ಅಧ್ಯಕ್ಷ ಡಾ.ಪ್ರಭಾಕರ ಭಟ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ 26 ಲಕ್ಷ ರೂಪಾಯಿಯನ್ನು ನೀಡಿದರು.
ಕೊಲ್ಲೂರು ದೇವಾಲಯದ ವತಿಯಿಂದ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ನೀಡಲಾಗುತ್ತಿದ್ದ ದತ್ತಿ ಹಣವನ್ನು ಸರ್ಕಾರ ರದ್ದು ಮಾಡಿತ್ತು. ಆ ಬಳಿಕ ವಿದ್ಯಾರ್ಥಿಗಳು ಸೇರಿದಂತೆ ಹಲವೆಡೆ ಪ್ರತಿಭಟನೆಗಳು ನಡೆದಿದ್ದವು. ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಶಾಲಾ ಮಕ್ಕಳ ಬಿಸಿಯೂಟಕ್ಕಾಗಿ ‘ಭಿಕ್ಷಾಂದೇಹಿ’ ಆದೋಲನ ಕೈಗೊಳ್ಳಲಾಗಿತ್ತು.ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಪ್ರಮುಖರು ಮನೆ ಮನೆಗೆ ತೆರಳಿ ಭಿಕ್ಷೆ ಬೇಡಿದ್ದರು.
ರೆಡ್ಡಿ ಅವರು ಮಕ್ಕಳ ಊಟಕ್ಕಾಗಿ ದೇಣಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.