Advertisement
ಆ್ಯಂಬಿಡೆಂಟ್ ಕಂಪೆನಿ ಮೂಲಕ 57 ಕೆ.ಜಿ ಚಿನ್ನದ ಗಟ್ಟಿ ಸ್ವೀಕರಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಲುಪಿಸಿರುವಗಂಭೀರ ಆರೋಪ ಎದುರಿಸುತ್ತಿರುವ ಅಲಿಖಾನ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಲಿಖಾನ್ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರ ವಾದ ಪ್ರತಿ ವಾದ ಅಲಿಸಿ ಆದೇಶ ಕಾಯ್ದಿರಿಸಿದ್ದ 61ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಮಂಗಳವಾರ ಅಲಿಖಾನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದರು. ಜತೆಗೆ, ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ. ಹೀಗಾಗಿ, ಆರೋಪಿಗೆ ನಿರೀಕ್ಷಣಾ ಜಾಮೀನು ಮುಂಜೂರು ಮಾಡಬಾರದು ಎಂಬ ಅಭಿಯೋಜನಾ ತಕರಾರುಗಳನ್ನು
ನ್ಯಾಯಾಧೀಶರು ಮಾನ್ಯ ಮಾಡಿದ್ದಾರೆ.
ಮಾಡಬೇಕಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ ಎಂಬ ಇನ್ನಿತರೆ ಅಂಶಗಳನ್ನು ಪರಿಗಣಿಸಿ ಆರೋಪಿಯ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ವಜಾಗೊಳಿಸಿದೆ.