Advertisement

Janardhana Reddy ಮರಳಿ ಬಿಜೆಪಿಗೆ? ಪಕ್ಷಕ್ಕೆ ಕರೆತರಲು ತೆರೆಮರೆಯಲ್ಲಿ ಬಿರುಸಿನ ಕಸರತ್ತು

10:05 PM Nov 20, 2023 | Team Udayavani |

ಬೆಂಗಳೂರು: ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಮರಳಿ ಬಿಜೆಪಿಗೆ ಸೇರಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ಪ್ರಾರಂಭವಾಗಿದೆ.

Advertisement

ಲೋಕಸಭೆ, ಜಿಲ್ಲಾ ಮತ್ತು ತಾಲೂಕು ಪಂಚಾಯಥ್‌ ಚುನಾವಣೆಗಳನ್ನು ಗೆಲ್ಲುವ ದೃಷ್ಟಿಯಿಂದ ರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಚರ್ಚೆ ಪ್ರಾರಂಭವಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಮತ ವಿಭಜನೆ ತಡೆಯುವುದು ಇದರ ಹಿಂದಿನ ಉದ್ದೇಶವಾಗಿದೆ. ಈ ಸಂಬಂಧ ವರಿಷ್ಠರ ಜತೆಗೆ ರಾಜ್ಯ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ರೆಡ್ಡಿ ವಾಪಸ್‌ ಬರುವುದರಿಂದ ಆಗುವ ಲಾಭ, ಎದುರಾಗುವ ಸವಾಲುಗಳ ಕುರಿತೂ ಪಕ್ಷದಲ್ಲಿ ಚರ್ಚೆ ನಡೆಯುತ್ತಿದ್ದು, ಮಾಜಿ ಸಚಿವ ಬಿ.ಶ್ರೀರಾಮುಲು ಅವರನ್ನು ಸೇತುವೆಯಾಗಿ ಬಳಸಿಕೊಳ್ಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next