Advertisement

ಮೋದಿ ನಾಯಕತ್ವದಿಂದ ಬಲಿಷ್ಠ ಭಾರತ

04:13 PM Jul 07, 2020 | Suhan S |

ಗೋಕಾಕ: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ 2ನೇ ಅವಧಿಯ ಒಂದು ವರ್ಷ ಪೂರ್ಣಗೊಂಡಿದ್ದು, ವಿಶ್ವದಲ್ಲಿಯೇ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಇದಕ್ಕೆ ಪ್ರಧಾನಿ ಮೋದಿ ಅವರ ದೂರದೃಷ್ಟಿ ನಾಯಕತ್ವವೇ ಕಾರಣವೆಂದು ಅರಭಾಂವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

Advertisement

ಸೋಮವಾರ ಸಂಜೆ ಇಲ್ಲಿಯ ಎನ್‌ಎಸ್‌ಎಫ್‌ ಅತಿಥಿ ಗೃಹದಲ್ಲಿ ಬಿಜೆಪಿ ಅರಭಾಂವಿ ಮಂಡಲ ಹಮ್ಮಿಕೊಂಡಿದ್ದ ಕರ್ನಾಟಕ ಜನಸಂವಾದ ಸಮಾರೋಪ ಸಮಾರಂಭದ ನಿಮಿತ್ತ ಕಾರ್ಯಕರ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, ಮಹಾಮಾರಿ ಕೋವಿಡ್  ವೈರಸ್‌ ಹಿನ್ನೆಲೆಯಲ್ಲಿ ನಾಗರಿಕರ ಸುರಕ್ಷತೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳನ್ನು ಶ್ಲಾಘಿಸಿ ಅಭಿನಂದಿಸಿದರು. ಕಳೆದ ಮಾರ್ಚ್‌ ತಿಂಗಳಿನಿಂದ ಮಹಾಮಾರಿ ಕಾಡುತ್ತಿದೆ. ಜನತೆಗೆ ಲಾಕ್‌ಡೌನ್‌ ಸಮಯದಲ್ಲಿ ಸಾಕಷ್ಟು ತೊಂದರೆಯಾಗಿದೆ. ಜನರ ಸಂಕಷ್ಟವನ್ನು ಅರಿತು ನಮ್ಮ ಕಾರ್ಯಕರ್ತರು ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಕಷ್ಟದಲ್ಲಿರುವ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‌, ಬಟ್ಟೆ, ಹೊದಿಕೆ, ಮಾಸ್ಕ್, ಸ್ಯಾನಿಟೆ„ಸರ್‌ ಸೇರಿದಂತೆ ದಿನಬಳಕೆ ವಸ್ತುಗಳನ್ನು ವಿತರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ  ವರು ಸಮರ್ಥವಾಗಿ ಕಾರ್ಯ ನಿಭಾಯಿಸುವ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದರು.

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಮಾತನಾಡಿ, ಪ್ರಧಾನಿ ಮೋದಿ ಅವರ ಆತ್ಮನಿರ್ಭರ ಪರಿಕಲ್ಪನೆಯು ದೇಶದ ನಾಗರಿಕರ ಸ್ವಾವಲಂಬಿ ಬದುಕಿಗೆ ಬುನಾದಿ ಯಾಗಿದೆ. ರೈತರಿಗೆ ಸಾಕಷ್ಟು ಯೋಜನೆಗಳನ್ನುಜಾರಿಗೊಳಿಸಿದೆ. ಬಿಜೆಪಿ ಮುಸ್ಲಿಮರ ವಿರೋಧಿಯಲ್ಲ. ದೇಶ ವಿರೋಧಿ  ಚಟುವಟಿಕೆ ನಡೆಸುವವರನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಹೇಳಿದರು.

ಶಾಸಕರ ಆಪ್ತ ಕಾರ್ಯದರ್ಶಿ ನಾಗಪ್ಪ ಶೇಖರಗೋಳ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ ಪಾಟೀಲ, ಮುಖಂಡರಾದ ಬಸವಂತ ಕಮತಿ, ಎಮ್‌.  ಕೆ.ಕುಳ್ಳೂರ, ಜಯಾನಂದ ಪಾಟೀಲ, ಈರಣ್ಣ ಅಂಗಡಿ, ಅಬ್ದುಲ ಡಾಂಗೆ, ಚುನಾಯಿತ ಪ್ರತಿನಿಧಿ ಗಳು, ಸಹಕಾರಿಗಳು, ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೂಡಲಗಿ, ಕೌಜಲಗಿ, ಹಳ್ಳೂರ, ಯಾದವಾಡ ಮುಂತಾದೆಡೆ ಜನಸಂವಾದ ಸಮಾರೋಪ ಸಮಾರಂಭವನ್ನು ವೀಕ್ಷಿಸಲು ಎಲ್‌ ಇಡಿ ಸ್ಕ್ರೀನ್‌ ವ್ಯವಸ್ಥೆ ಮಾಡಲಾಗಿತ್ತು

Advertisement

Udayavani is now on Telegram. Click here to join our channel and stay updated with the latest news.

Next