Advertisement

ಡಿಸಿ ರೋಹಿಣಿ ಸಿಂಧೂರಿ- ಶಾಸಕರ ಮುನಿಸಿಗೆ ಬಲಿಯಾದ ಜನಸ್ಪಂದನ ಕಾರ್ಯಕ್ರಮ!

11:37 AM Nov 30, 2020 | keerthan |

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಜನಪ್ರತಿನಿಧಿಗಳ ಮುನಿಸಿಗೆ ಜನಸ್ಪಂದನ ಕಾರ್ಯಕ್ರಮವನ್ನೇ ರದ್ದುಗೊಳಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

Advertisement

ಕಂದಾಯ ಸಚಿವ ಆರ್.ಅಶೋಕ್ ಅವರು ಜನಸ್ಪಂದನ ಕಾರ್ಯಕ್ರಮವನ್ನು ರದ್ದುಗೊಳಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಜಿಲ್ಲಾಧಿಕಾರಿ ನನ್ನನ್ನು ಭೇಟಿ ಮಾಡಿದ್ದರು. ಈ ವೇಳೆ ಜನಪ್ರತಿನಿಧಿಗಳ ಜತೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ತಿಳಿಸಿದ್ದೇನೆ. ಜನಸ್ಪಂದನ ಕಾರ್ಯಕ್ರಮದ ಉದ್ಘಾಟನೆಗೆ ಶಾಸಕರನ್ನು ಕರೆಯಲೇಬೇಕು ಎಂದು ಸೂಚಿಸಿದ್ದೇನೆ ಎಂದರು.

ಈಗ ಜನಸ್ಪಂದನ ಕಾರ್ಯಕ್ರಮ ರದ್ದಾಗಿದೆ. ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಗಳ ನಡಿಗೆ ಗ್ರಾಮದ ಕಡೆಗೆ ಕಾರ್ಯಕ್ರಮವಿರಲಿದೆ. ಇದಕ್ಕೆ ಮಾರ್ಗಸೂಚಿಗಳನ್ನು ಸಿದ್ದಪಡಿಸಲಾಗುತ್ತಿದೆ. ಈ ವೇಳೆ ಜನರ ಅಹವಾಲಗಳನ್ನು ಕೇಳಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಎಚ್ಚರ!…ಸಾರ್ವಜನಿಕ ಸೆಂಟರ್‌ನಲ್ಲಿ ಮೊಬೈಲ್‌ ಚಾರ್ಜ್ ಮಾಡುವುದು ಎಷ್ಟು ಸುರಕ್ಷಿತ?

ಜನಸ್ಪಂದನ ಕಾರ್ಯಕ್ರಮ ರದ್ದತಿಯಿಂದ ಸಾರ್ವಜನಿಕರಿಗೆ ಅನಾನೂಕೂಲವಾಗಿದೆ ಎಂದು ನಾನೂ ಒಪ್ಪುತ್ತೇನೆ. ಆದರೆ ಇಂದಿನಿಂದ ಅದು ಆಗುವುದಿಲ್ಲ ಎಂದು ಅಶೋಕ್ ಭರವಸೆ ನೀಡಿದರು.

Advertisement

ಡಿಸಿ ರೋಹಿಣಿ ಸಿಂಧೂರಿ ಅವರು ಶಾಸಕರನ್ನು ಬಿಟ್ಟು ತಾವೇ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆಂದು ಜಿಲ್ಲೆಯ ಶಾಸಕರು ಆರೋಪಿಸಿದ್ದರು. ಬಹಿರಂಗವಾಗಿಯೇ ಜಿಲ್ಲಾಧಿಕಾರಿಗಳ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next