Advertisement

“ಸಹಕಾರ ಸಂಘಗಳ ಮೂಲಕ ಜನೌಷಧ ಕೇಂದ್ರ’

01:26 PM Nov 15, 2020 | Suhan S |

ಪುತ್ತೂರು, ನ. 14: ಮುಂಬರುವ ದಿನಗಳಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರಾಥಮಿಕ ಸಹಕಾರ ಸಂಘಗಳ ಮೂಲಕ ಜನೌಷಧ ಕೇಂದ್ರಗಳನ್ನು ತೆರೆಯ ಲಾಗುವುದು ಎಂದು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

Advertisement

ಪುತ್ತೂರು ಬಂಟರ ಭವನದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌, ಜಿಲ್ಲಾ ಸಹಕಾರಿ ಯೂನಿಯನ್‌, ತಾಲೂಕು ಸಹಕಾರಿ ಯೂನಿಯನ್‌, ಪುತ್ತೂರು ತಾಲೂಕಿನ ಎಲ್ಲ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ 67ನೇ ಅಖೀಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಜಿಲ್ಲೆಯ ಸಹಕಾರ ಸಂಘಗಳ ಮೂಲಕ ಪ್ರಧಾನ ಮಂತ್ರಿ ಜನೌಷಧ ಕೇಂದ್ರಗಳಲ್ಲಿ ಔಷಧ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ಸಹಕಾರ ಧ್ವಜಾರೋಹಣಗೈದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಅವಿ ಭಜಿತ ಜಿಲ್ಲೆಯ ಸಹಕಾರ ಚಳವಳಿಯ ಮೂಲ ನೆಲ ಪುತ್ತೂರು. ಇಲ್ಲಿಂದ ಹಬ್ಬಿದ ಸಹಕಾರ ಕ್ಷೇತ್ರವೀಗ ರಾಷ್ಟ್ರವ್ಯಾಪಿಯಾಗಿ ವಿಸ್ತರಿಸಿದೆ. ದೇಶದ ಜಿಡಿಪಿ ಬೆಳವಣಿಗೆಯಲ್ಲಿ ಕೊಡುಗೆ ನೀಡಿದೆ ಎಂದ ಅವರು, ಟಿಎಪಿಸಿ ಎಂಎಸ್‌ ಮತ್ತು ಪಿಎಲ್‌ಡಿ ಬ್ಯಾಂಕ್‌ಗಳನ್ನು ಉಳಿಸುವ ಕೆಲಸ ಸಹಕಾರ ಕ್ಷೇತ್ರದಿಂದ ನಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ ವಹಿಸಿದ್ದರು. ಹಿರಿಯ ಸಹಕಾರಿಗಳಾದ ಸವಣೂರು ಕೆ. ಸೀತಾರಾಮ ರೈ, ಕರುಣಾಕರ ಗೋಗಟೆ, ಸಹಕಾರ ಸಪ್ತಾಹ ಕಾರ್ಯಕ್ರಮದ ಸಂಚಾಲಕ ಶಶಿಕುಮಾರ್‌ ರೈ ಬಾಲ್ಯೊಟ್ಟು ಅವರನ್ನು ಸಮ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಸಹಕಾರಿ ರಮೇಶ್‌ ಭಟ್‌ ಉಪ್ಪಂಗಳ ಅವರು ಕೋವಿಡ್  ನಂತರ ಸಹಕಾರ ಸಂಸ್ಥೆಗಳ ಜವಾಬ್ದಾರಿ ಮತ್ತು ಪಾತ್ರ ಎಂಬ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರ ಸಂಘಗಳ ನಿಬಂಧಕ ಪ್ರವೀಣ್‌ ಬಿ. ನಾಯಕ್‌, ಕ್ಯಾಂಪ್ಕೋ ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಸಹಕಾರಿ ಯೂನಿಯನ್‌ ನಿರ್ದೇಶಕ

Advertisement

ರಾಜ್‌ ಶೇಖರ್‌ ಜೈನ್‌, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಎಸ್‌.ಬಿ. ಜಯರಾಮ ರೈ, ಜಿಲ್ಲಾ ಕೆಎಂಎಫ್‌ ನಿರ್ದೇಶಕ ನಾರಾಯಣ್‌ ಪ್ರಕಾಶ್‌ ನೆಲ್ಲಿತ್ತಿಮಾರ್‌, ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್‌ ಮೆದು, ಪುತ್ತೂರು ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಭಾಸ್ಕರ ಗೌಡ ಇಚ್ಲಂಪಾಡಿ, ಟಿಎಪಿಸಿಎಂಎಸ್‌ ಅಧ್ಯಕ್ಷ ಕೃಷ್ಣ ಕುಮಾರ್‌ ರೈ, ತಾಲೂಕು ಸಹಕಾರಿ ಯೂನಿಯನ್‌ ಅಧ್ಯಕ್ಷ ಪ್ರವೀಣ್‌ ರೈ ಮೇನಾಲ ಉಪಸ್ಥಿತರಿದ್ದರು.

ಶಶಿಕುಮಾರ್‌ ರೈ ಬಾಲ್ಯೊಟ್ಟು ಸ್ವಾಗತಿಸಿ, ಜಿಲ್ಲಾ ಸಹಕಾರಿ ಯೂನಿಯನ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪುರುಷೋತ್ತಮ ಎಸ್‌.ಪಿ. ವಂದಿಸಿದರು. ರಾಕೇಶ್‌ ರೈ ಕಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಪ್ರಾರಂಭದಲ್ಲಿ ನಗರದ ಮೊಳಹಳ್ಳಿ ವೃತ್ತದಲ್ಲಿ ಮೊಳಹಳ್ಳಿ ಶಿವರಾಯರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಹಕಾರ ಸಪ್ತಾಹಕ್ಕೆ ಚಾಲನೆ ನೀಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next