Advertisement

Kannada Cinema; ‘ಕೋಟಿ’ಯಿಂದ ಬಂತು ಜನತಾ ಸಿಟಿ; ಧನಂಜಯ್‌ ನಟನೆಯ ಸಿನಿಮಾ

02:31 PM May 26, 2024 | Team Udayavani |

ಧನಂಜಯ್‌ ನಾಯಕರಾಗಿರುವ “ಕೋಟಿ’ ಸಿನಿಮಾದ “ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್‌ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್‌ ಹೆಗ್ಡೆ ಹಾಡಿದ್ದಾರೆ.

Advertisement

ಈ ಹಾಡಿನ ಸಂಯೋಜಕರಾದ ವಾಸುಕಿ ವೈಭವ್‌ ಮಾತನಾಡಿ, “ಕೋಟಿ “ಜನತಾ ಸಿಟಿ’ಯಲ್ಲಿ ಜೀವನ ನಡೆಸುತ್ತಿದ್ದಾನೆ. ಅವನಿಗೆ ಯಾರಿಗೂ ಮೋಸ ಮಾಡದೆ, ನೋವು ನೀಡದೆ ಒಂದು ಕೋಟಿ ದುಡಿಯುವ ಆಸೆ. ಈ ಹಾಡು ಅವನ ಮತ್ತು ಜನತಾ ಸಿಟಿಯ ಸಂಬಂಧವನ್ನು ಹೇಳುತ್ತದೆ. ಈ ಹಾಡನ್ನು ಬರೆದು, ಸಂಯೋಜಿಸುವುದು ಎಕ್ಸೈಟಿಂಗ್‌ ಮತ್ತು ಚಾಲೆಂಜಿಂಗ್‌ ಆಗಿತ್ತು’ ಎಂದರು.

“ಕೋಟಿ ಸಿನಿಮಾದಲ್ಲಿ “ಜನತಾ ಸಿಟಿ’ ಹಾಡು ನನಗೆ ತುಂಬಾ ಇಷ್ಟದ ಹಾಡು. ನಾನು ಒಂದು ಸಣ್ಣ ಹಳ್ಳಿಯಿಂದ ಬೆಂಗಳೂರಿಗೆ ಬಂದವನು. ಮಹಾನಗರಗಳಿಗೆ ಏನೋ ಸೆಳೆಯುವ ಗುಣ. ಈ ಹಾಡು ಮಹಾನಗರಗಳಲ್ಲಿ ಬದುಕುವ ಎಲ್ಲರಿಗೂ ತುಂಬಾ ಕನೆಕ್ಟ್ ಆಗಲಿದೆ’ ಎನ್ನುವುದು ನಿರ್ದೇಶಕ ಪರಮ್‌ ಮಾತು.

ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್‌ ಮತ್ತು ಖಳನಾಯಕನಾಗಿ ರಮೇಶ್‌ ಇಂದಿರಾ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ತಾರಾ, ಸರ್ದಾರ್‌ ಸತ್ಯ ಜತೆಗೆ ಪೃಥ್ವಿ ಶಾಮನೂರು, ತನುಜಾ ವೆಂಕಟೇಶ್‌ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್‌ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್‌ ಭಟ್‌ ಮತ್ತು ವಾಸುಕಿ ವೈಭವ್‌ ಸಾಹಿತ್ಯ ರಚಿಸಿದ್ದಾರೆ. ಈ ಸಿನೆಮಾವನ್ನು ಜಿಯೋ ಸ್ಟುಡಿಯೋಸ್‌ ನಿರ್ಮಾಣ ಮಾಡಿದೆ. ಚಿತ್ರ ಜೂನ್‌ 14ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next