Advertisement
ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ಇರಿಸಿರುವ ಬೃಹತ್ ಬ್ರಹ್ಮ ಕಲಶಕ್ಕೆ ಹಿರಿಯ ಪುರೋಹಿತರಿಂದ ಪೂಜಾ ಕೈಂಕರ್ಯ ನಡೆಯಲಿದೆ.
Related Articles
Advertisement
ಪೂಜೆಯಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ನಾಯಕರಾದ ಹೆಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಶಾಸಕರು ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ಪರಂಪರೆಯ ಮಂಟಪ
ಕಳಸ ಪ್ರತಿಷ್ಠಾಪನೆ ಮಾಡಲಿರುವ ಮಂಟಪವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಕರ್ನಾಟಕದ ಪರಂಪರೆಯನ್ನು ಬಿಂಬಿಸುವ ವಾಸ್ತುಶಿಲ್ಪ ಉಳ್ಳ ಮಂಟಪ ವಿಶೇಷ ಆಕರ್ಷಣೆಯಾಗಿದೆ. ಇಡೀ ಮಂಟಪವನ್ನು ಆವರಣ ಮಂಟಪ ಕಲಾ ಆರ್ಟ್ ನ ಕಲಾವಿದರು ಸಿದ್ಧಪಡಿಸಿದ್ದಾರೆ. ಈ ಮಂಟಪದಲ್ಲಿ ನಿರಂತರವಾಗಿ ಜಪ, ಮಂತ್ರ, ಮಂಗಳ ನಾದ ಮೊಳಗುತ್ತಿರುತ್ತದೆ.
ನೀರು ಶುದ್ಧೀಕರಣಕ್ಕೆ ವಿಶೇಷ ವ್ಯವಸ್ಥೆ
ಪವಿತ್ರ ಗಂಗಾಜಲವು ಸುಮಾರು ಒಂದು ವರ್ಷ ಕಾಲ ಈ ಕಳಸದಲ್ಲಿ ಇರಲಿದೆ. ನೀರು ಕೆಡದಂತೆ ನೋಡಿಕೊಳ್ಳಲು ವಿಶೇಷ ಯುವಿ – ಓಜೋನೈಶನ್ ವ್ಯವಸ್ಥೆ ಮಾಡಲಾಗಿದೆ. ಇದು ಆಮ್ಲಜನಕಯುಕ್ತ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 16ರಂದು ಹನುಮ ಜಯಂತಿ ಪುಣ್ಯದಿನ 15 ಕಡೆ ಜಲ ಸಂಗ್ರಹ ಮಾಡುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಗಿತ್ತು. ಹದಿನೈದು ಗಂಗಾ ರಥಗಳ ಜತೆಗೆ ಹದಿನೈದು ಕ್ರಿಯಾಶೀಲ ತಂಡಗಳು ಈ ಅದ್ವಿತೀಯ ಯಾತ್ರೆಯಲ್ಲಿ ಭಾಗವಹಿಸಿದ್ದವು.
ರಥಗಳು ಸಾಗುವ ಆಯಾ ಮಾರ್ಗದ ಎಲ್ಲ ಚಟುವಟಿಕೆಗಳನ್ನು ಈ ತಂಡಗಳು ನಿರ್ವಹಿಸಿದವು. ಪಕ್ಷದ ಶಾಸಕರು, ಜಿಲ್ಲಾ ಅಧ್ಯಕ್ಷರು, ಇನ್ನಿತರೆ ಎಲ್ಲ ನಾಯಕರು ಈ ಜಲಧಾರೆಯನ್ನು ಯಶಸ್ವಿಗೊಳಿಸಿದರು.
ಮೇ 8ರಂದು ಬೆಂಗಳೂರು ನಗರಕ್ಕೆ ಎಲ್ಲ ರಥಗಳು ಜಲ ಸಂಗ್ರಹ ಮಾಡಿಕೊಂಡು ವಾಪಸ್ ಬಂದವು. ನೆಲಮಂಗಲ ಸಮೀಪ ಮೇ 13 ರಂದು ಜನತಾ ಜಲಧಾರೆಯ ಮಹಾ ಸಂಕಲ್ಪ ಸಮಾರೋಪ ಸಮಾವೇಶ ನಡೆಯಿತು. ಎಲ್ಲ ಜಿಲ್ಲೆಗಳಿಗೂ ಜಲ ಸಮಾನತೆ ಹಾಗೂ ಜಲ ಸಂಪನ್ಮೂಲಗಳ ಸದ್ಬಳಕೆಯಾಗುವಂತೆ ಮಾಡುವುದೇ ಜೆಡಿಎಸ್ ಪಕ್ಷದ ಜಲ ಸಂಕಲ್ಪವಾಗಿದೆ ಎಂದು ಅವರು ತಿಳಿಸಿದರು.