ಗುಬ್ಬಿ : ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್ಆರ್ ಶ್ರೀನಿವಾಸ್ ಶುಕ್ರವಾರ ನೆಲಮಂಗಲದಲ್ಲಿ ನಡೆದ ಜನತಾ ಜಲಧಾರೆ ಸಮಾರೋಪ ಸಮಾರಂಭಕ್ಕೆ ಗೈರು ಹಾಜರಾಗುವ ಮೂಲಕ ಜೆಡಿಎಸ್ ನಾಯಕರಿಂದ ಮತ್ತಷ್ಟು ಅಂತರವನ್ನು ಕಾಯ್ದುಕೊಂಡತಾಗಿದೆ.
ಶ್ರೀನಿವಾಸ್ ಅವರು ಕಳೆದ ಮೂರು ಬಾರಿ ಜೆಡಿಎಸ್ ಪಕ್ಷದಿಂದ ಗೆದ್ದು ಶಾಸಕರಾಗಿದ್ದರು. ಕಳೆದ ಎರಡು ವರ್ಷಗಳಿಂದೀಚೆಗೆ ಜೆಡಿಎಸ್ ಪಕ್ಷದ ನಾಯಕರಿಂದ ಅಂತರವನ್ನು ಕಾಯ್ದುಕೊಂಡಿದ್ದರು. ಜೆಡಿಎಸ್ ಪಕ್ಷವನ್ನು ತೊರೆದು ಬೇರೆ ಪಕ್ಷದತ್ತ ಒಲವು ತೋರುತ್ತಿದ್ದಾರೆ ಎಂಬುದು ಸಾರ್ವಜನಿಕವಾಗಿ ಚರ್ಚೆಯಾಗುತ್ತಿದೆ.
ಜನತಾ ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಗೈರು ಹಾಜರಾಗುವ ಮೂಲಕ ಜೆಡಿಎಸ್ ಪಕ್ಷದಿಂದ ದೂರ ಉಳಿಯುವ ಸೂಚನೆ ಎಂಬಂತಾಗಿದೆ. ಮುಂದಿನ ವಿಧಾನಸಭಾ ಚುನಾವಣೆ ವೇಳೆ ಬೇರೆ ಪಕ್ಷ ಸೇರ್ಪಡೆಯಾಗುವುದು ಖಚಿತವಾದಂತಿದೆ.