ಜೇವರ್ಗಿ: ಅಜಾತಶತ್ರು ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿರುವ ಮಾಜಿ ಮುಖ್ಯಮಂತ್ರಿ ನಾರಾಯಣಸಿಂಗ್ ಧರಂಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜಿಲ್ಲೆ ಸೇರಿ ರಾಜ್ಯದ ಮೂಲೆಮೂಲೆಗಳಿಂದ ಸಹಸ್ರಾರು ಅಭಿಮಾನಿಗಳು ಆಗಮಿಸಿದ್ದರು. ಪಟ್ಟಣದ ಶಹಾಪುರ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಧರಂಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿತ್ತು. ತಮ್ಮ ನೆಚ್ಚಿನ ನಾಯಕನ ಮುಖವನ್ನು
ಕೊನೇ ಬಾರಿ ನೋಡಲು ಸಾಗರೋಪಾದಿಯಲ್ಲಿ ಕಾರ್ಯಕರ್ತರು, ಅಭಿಮಾನಿಗಳು, ಮಹಿಳೆಯರು ಆಗಮಿಸಿದರು.
ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್‌ನಿಂದ ಕ್ರೀಡಾಂಗಣವರೆಗೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮಧ್ಯಾಹ್ನ 1 ಗಂಟೆಗೆ ಪಾರ್ಥಿವ ಶರೀರ ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಸೇರಿದ್ದ ಅಭಿಮಾನಿಗಳು ಕಂಬನಿ ಮಿಡಿದರು. ರಸ್ತೆಯ
ಎರಡೂ ಬದಿಯಲ್ಲಿ ಸಾವಿರಾರು ಜನರು ಸಾಲುಗಟ್ಟಿ ನಿಂತಿದ್ದರು.
ಅಖಂಡೇಶ್ವರ ವೃತ್ತ, ಬಸವೇಶ್ವರ ವೃತ್ತ, ಕ್ರೀಡಾಂಗಣದ ಬಳಿ ಬ್ಯಾರಿಕೇಡ್ ಅಳವಡಿಸಿ ಜನಸಾಗರವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಧರಂಸಿಂಗ್ ಅಂತಿಮ ದರ್ಶನಕ್ಕೆ ಆಗಮಿಸಿದ ಅಭಿಮಾನಿಗಳತ್ತ ಪತ್ನಿ ಪ್ರಭಾವತಿ ಧರಂಸಿಂಗ್, ಪುತ್ರರಾದ ಶಾಸಕ ಡಾ| ಅಜಯಸಿಂಗ್, ವಿಧಾನಪರಿಷತ್ ಸದಸ್ಯ ವಿಜಯಸಿಂಗ್, ಪುತ್ರಿ ಪ್ರಿಯದರ್ಶಿನಿ ಕೈಮುಗಿದು ಅಳುತ್ತಿರುವ ದೃಶ್ಯ ನೆರೆದವರ ಮನ ಕಲುಕಿತು. ಮಧ್ಯಾಹ್ನ 3 ಗಂಟೆಗೆ ಸ್ವಗ್ರಾಮ ನೆಲೋಗಿಗೆ ಪಾರ್ಥಿವ ಶರೀರ ಕೊಂಡೊಯ್ಯಲಾಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯಸಿಂಗ್, ಆಸ್ಕರ್ ಫರ್ನಾಂಡೀಸ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಪೌರಾಡಳಿತ ಸಚಿವ ಈಶ್ವರ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಡಾ|ಶರಣಪ್ರಕಾಶ ಪಾಟೀಲ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ ಗುಂಡೂರಾವ್, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ನಾಲವಾರದ ಡಾ| ಸಿದಟಛಿತೋಟೇಂದ್ರ ಶಿವಾಚಾರ್ಯರು, ಕಡಕೋಳದ ರುದ್ರಮುನಿ ಶಿವಾಚಾರ್ಯ, ಯಡ್ರಾಮಿಯ ಸಿದಟಛಿಲಿಂಗ ದೇವರು ಸೇರಿ ಸಹಸ್ರಾರು ಜನರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.