Advertisement

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜನೋತ್ಸವ ಪೂರ್ವ ಸಿದ್ಧತ ಸಭೆ

11:26 PM Aug 16, 2022 | Team Udayavani |

ಬೆಂಗಳೂರು: ರಾಜ್ಯ ಸರಕಾರಕ್ಕೆ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆ. 28ರಂದು ಜನೋತ್ಸವ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತೆ ಸಭೆ ನಡೆಯಿತು.

Advertisement

ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಬಿಜೆಪಿ ಮುಖಂಡರು ಹಾಗೂ ಸಚಿವರಾದ ಡಾ| ಕೆ. ಸುಧಾಕರ್‌, ಬೈರತಿ ಬಸವರಾಜ್‌, ಮುನಿರತ್ನ, ಮಾಜಿ ಶಾಸಕರಾದ ಮಂಜುನಾಥ ಗೌಡ, ವೈ. ಸಂಪಂಗಿ ಸೇರಿ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಜನೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next