Advertisement

ಜಂತಕಲ್‌ ಮೈನಿಂಗ್‌ ಪ್ರಕರಣ: 20ರವರೆಗೆ ಎಚ್‌ಡಿಕೆ ನಿರಾಳ

01:01 PM Jun 16, 2017 | |

ಬೆಂಗಳೂರು: ಜಂತಕಲ್‌ ಎಂಟರ್‌ಪ್ರೈಸಸ್‌ ಕಂಪನಿಗೆ ಪರವಾನಿಗೆ ನೀಡಲು ಸಹಕರಿಸಿದ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿಯನ್ನು ಜೂನ್‌ 20ರವರೆಗೆ ಬಂಧಿಸದಂತೆ ಎಸ್‌ಐಟಿ ಅಧಿಕಾರಿಗಳಿಗೆ ಹೈಕೋರ್ಟ್‌ ನಿರ್ದೇಶಿಸಿದೆ. ಕುಮಾರಸ್ವಾಮಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.

Advertisement

ವಿಚಾರಣೆ ವೇಳೆ ಹಾಜರಿದ್ದ ಅರ್ಜಿದಾರರ ಪರ ವಕೀಲ ಹಸ್ಮತ್‌ ಪಾಷಾ ವಾದಿಸಿ, ಈ ಪ್ರಕರಣದಲ್ಲಿ ತಮ್ಮ ಅರ್ಜಿದಾರರ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ಅವರನ್ನು ಈ ಪ್ರಕರಣದಲ್ಲಿ ವಿನಾಕಾರಣ ಸಿಲುಕಿಸಲಾಗಿದೆ. ಜೊತೆಗೆ ತಮ್ಮ  ಅರ್ಜಿದಾರರು ಪ್ರಕರಣದ ತನಿಖೆಗೆ ಸಹಕರಿಸಿದ್ದಾರೆ. ಈ ನಿಟ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಕೋರಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಐಟಿ ಪರ ವಕೀಲರು, ಇದೊಂದು ಗಂಭೀರ ಪ್ರಕರಣವಾಗಿದ್ದು ಆರೋಪಿಯ ವಿಚಾರಣೆಯ ಅಗತ್ಯವಿದೆ. ಅರ್ಜಿದಾರರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು.ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಜೂನ್‌ 20ರವರೆಗೆ ಬಂಧಿಸದಂತೆ ಎಸ್‌ಐಟಿ ಅಧಿಕಾರಿಗಳಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next