ಬೆಂಗಳೂರು/ಉಡುಪಿ/ಮಂಗಳೂರು: ಖಗ್ರಾಸ ರಕ್ತ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಜ.31ರಂದು ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರ, ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದಿಂದ ರಾತ್ರಿ 9ರವರೆಗೆ ದೇವರ ದರ್ಶನ ಹಾಗೂ ಪೂಜಾ ಸೇವೆ ಇರುವುದಿಲ್ಲ
(ಚಂದ್ರಗ್ರಹಣ: ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಇಲ್ಲ) ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಗರಿಕೆ ಹುಲ್ಲಿನಿಂದ ಶಿವಲಿಂಗವನ್ನು ಮುಚ್ಚಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ.
ಅದೇ ರೀತಿ ಉಡುಪಿ ಕೃಷ್ಣಮಠದಲ್ಲಿಯೂ ಕೂಡಾ ಬೆಳಗ್ಗೆ 8ಗಂಟೆಯೊಳಗೆ ಮಹಾಪೂಜೆ,ಸಂಜೆ ಚಂದ್ರೋದಯದೊಳಗೆ ಮಹಾಪೂಜೆ ನೆರವೇರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಅನ್ನಸಂತರ್ಪಣೆ ಸೇವೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆಯಲ್ಲಿ ಹೇಳಿದೆ.
150 ವರ್ಷಕ್ಕೊಮ್ಮೆ ನಡೆಯೋ ಗ್ರಹಣ ಇದು!
ಬುಧವಾರ (ಜ. 31) ನಡೆಯುವ ಚಂದ್ರಗ್ರಹಣ ವಿಶೇಷವಾದುದು. ಅದು ಕೇವಲ ಹುಣ್ಣಿಮೆಯಲ್ಲ, ಸೂಪರ್‌ಮೂನ್ ಹುಣ್ಣಿಮೆ. ಜತೆಗೆ ಖಗ್ರಾಸ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. ಹೀಗಾಗುವುದು ಸುಮಾರು 150 ವರ್ಷಕ್ಕೊಮ್ಮೆ ಎನ್ನುತ್ತಾರೆ ಖಗೋಳ ಪರಿಣತರು.