ಟೋಕಿಯೊ: ಸೆಂಟ್ರಲ್ ಜಪಾನ್ ನಲ್ಲಿ ಸೋಮವಾರ (ಜನವರಿ 01) ಬೆಳಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ನ ಹವಾಮಾನ ಕೇಂದ್ರ, ಪಶ್ಚಿಮ ಕರಾವಳಿ ಪ್ರದೇಶದಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಿರುವುದಾಗಿ ಎನ್ ಎಚ್ ಕೆ ವರದಿ ಮಾಡಿದೆ.
ಇದನ್ನೂ ಓದಿ:
ಸೆಂಟ್ರಲ್ ಜಪಾನ್ ನಲ್ಲಿ ಭಾರೀ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸುನಾಮಿ ಎಚ್ಚರಿಕೆಯನ್ನು ನೀಡಿ, ಕರಾವಳಿ ಪ್ರದೇಶದಲ್ಲಿದ್ದ ಜನರನ್ನು ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ ಎಂದು ವರದಿ ವಿವರಿಸಿದೆ.
ಪ್ರಬಲ ಭೂಕಂಪನದಿಂದಾಗಿ ಸೆಂಟ್ರಲ್ ಜಪಾನ್ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದರಿಂದ ನೂರಾರು ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಸಮುದ್ರ ಪ್ರದೇಶದಲ್ಲಿಯೂ ಭಾರೀ ಗಾತ್ರದ ಅಲೆಗಳು ಎದ್ದೇಳುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದಿಂದ ಸಾವು, ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಕರಾವಳಿ ಪ್ರದೇಶದಲ್ಲಿ ಒಂದು ಮೀಟರ್ ಗಿಂತಲೂ ಎತ್ತರದ ಅಲೆಗಳು ಎದ್ದೇಳುತ್ತಿದ್ದು, ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ವರದಿ ತಿಳಿಸಿದೆ.