Advertisement

ಜಾರಕಿಹೊಳಿ ಸಿಡಿ ಪ್ರಕರಣ; ತನಿಖೆ ಮರುಪರಿಶೀಲನೆ ಅನಗತ್ಯ: ಸೌಮೇಂದು ಮುಖರ್ಜಿ

08:57 AM Aug 13, 2021 | Team Udayavani |

ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಅನುಪಸ್ಥಿತಿಯಲ್ಲಿ ಎಸ್‌ಐಟಿ ನಡೆಸಿರುವ ತನಿಖೆಯನ್ನು ತಾನು ಮರು ಪರಿಶೀಲಿಸುವ ಅಗತ್ಯವಿಲ್ಲ ಎಂದು ಎಸ್‌ಐಟಿ ಮುಖ್ಯಸ್ಥರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಸೌಮೇಂದು ಮುಖರ್ಜಿ ಹೈಕೋರ್ಟ್‌ಗೆ ಹೇಳಿದ್ದಾರೆ.

Advertisement

ಪ್ರಕರಣವನ್ನು ಸಿಬಿಐ ತನಿಖೆ ವಹಿಸಬೇಕು ಮತ್ತು ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್‌ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾ. ಎ.ಎಸ್. ಓಕ್‌ ಹಾಗೂ ನ್ಯಾ. ಎನ್‌. ಎಸ್‌. ಸಂಜಯ್‌ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಎಸ್‌ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಪ್ರಕರಣದ ವಿಚಾರಣೆ ನಡೆದಿರುವುದಕ್ಕೆ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‌, ಸುದೀರ್ಘ‌ 3 ತಿಂಗಳ ಕಾಲ ಎಸ್‌ಐಟಿ ಮುಖ್ಯಸ್ಥರು ರಜೆಯಲ್ಲಿದ್ದರು. ಅವರು ತಮ್ಮ ಜವಾಬ್ದಾರಿಯನ್ನು ಬೇರೊಬ್ಬರಿಗೂ ವಹಿಸಿರಲಿಲ್ಲ. ಈ ರೀತಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ನಡೆಯಬಹುದೇ? ನಡೆದರೂ ಆ ವರದಿಯನ್ನು ಸಮರ್ಪಕವಾಗುತ್ತದೆಯೇ? ಎಂದು ಪ್ರಶ್ನಿಸಿತು. ಅಲ್ಲದೇ, ತಮ್ಮ ಅನುಪಸ್ಥಿತಿಯಲ್ಲಿ ನಡೆದ ಈವರೆಗಿನ ತನಿಖಾ ವರದಿಯನ್ನು ಪರಿಶೀಲಿಸುತ್ತಾರೆಯೇ ಎಂಬ ಬಗ್ಗೆ ಸೌಮೇಂದು ಮುಖರ್ಜಿಯವರ ನಿಲುವುಕೇಳಿ ತಿಳಿಸುವಂತೆ ಎಸ್‌ಐಟಿ ಪರ ವಕೀಲರನ್ನು ನ್ಯಾಯಪೀಠ ಹೇಳಿತು.

ಇದನ್ನೂ ಓದಿ:ನಿಯಮ ವ್ಯಾಪ್ತಿಗೆ ಚೌತಿ, ಮೊಹರಂ: ರಾಜ್ಯ ಸರಕಾರದಿಂದ ಹೊಸ ಮಾರ್ಗ ಸೂಚಿ

ಅದಕ್ಕೆ “ನಾನು ಸೌಮೇಂದು ಮುಖರ್ಜಿ ಯವರೊಂದಿಗೆ ಮಾತನಾಡಿದ್ದೇವೆ, ವರದಿಯನ್ನು ತಾನು ಪರಿಶೀಲಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಈ ಹಿಂದೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿನ ಹೇಳಿಕೆಗೆ ಈಗಲೂ ಬದ್ಧವಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ ಎಂದು ಎಸ್‌ ಐಟಿ ಪರ ವಕೀಲ ಪಿ. ಪ್ರಸನ್ನ ಕುಮಾರ್‌ ನ್ಯಾಯಪೀಠಕ್ಕೆ ತಿಳಿಸಿದರು.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಬ್ಬರು ತನಿಖಾಧಿಕಾರಿಗಳನ್ನು ನಿಯೋಜಿಸಿತ್ತು. ಅವರುತನಿಖೆಯನ್ನುನಡೆಸಿದ್ದಾರೆ. ತಾನು ರಜೆ ಮೇಲೆ ತೆರಳಿದ ಬಳಿಕ ಇನ್ನೊಬ್ಬ ಐಪಿಎಸ್‌ ಅಧಿಕಾರಿ ಸಂದೀಪ್‌ ಪಾಟೀಲ್‌ ತನಿಖೆಯ ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ಈ ಹಿಂದೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ತಿಳಿಸಿದ್ದರು. ರಜೆ ಬಳಿಕ ವಾಪಸ್‌ ಬಂದಿರಲಿಲ್ಲ. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿಗಳ ವಿಚಾರಣೆ ಮುಕ್ತಾಯಗೊಳ್ಳುವವರೆಗೆ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಸದಂತೆ ಎಸ್‌ ಐಟಿಗೆ ಸೂಚಿಸಿ ವಿಚಾರಣೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next