ಪುಣೆ: ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡ ಭರ್ಜರಿ ಜಯ ಸಾಧಿಸಿದೆ. ಪ್ಯಾಟ್ ಕಮಿನ್ಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೆಕೆಆರ್ ತಂಡ ನಾಲ್ಕು ಓವರ್ ಬಾಕಿ ಇರುವಂತೆ ಜಯ ಗಳಿಸಿದೆ.
ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟರ್ ನಿತೀಶ್ ರಾಣಾಗೆ ನಿಯಮ ಉಲ್ಲಂಘನೆ ಮಾಡಿದ ಕಾರಣಕ್ಕೆ ಛೀಮಾರಿ ಹಾಕಲಾಗಿದೆ.
ಮುಂಬೈ ಇಂಡಿಯನ್ಸ್ ವಿರುದ್ಧ ಪುಣೆಯಲ್ಲಿ ನಡೆದ ಪಂದ್ಯದಲ್ಲಿ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್‌ನ ನಿತೀಶ್ ರಾಣಾ ಅವರಿಗೆ ವಾಗ್ದಂಡನೆ ವಿಧಿಸಲಾಗಿದೆ ಮತ್ತು ಅವರ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಸತತ ಸೋಲಿನ ಬಳಿಕ ಬ್ರಾಡ್ ಕಾಸ್ಟರ್ಸ್ ವಿರುದ್ಧ ರೇಗಾಡಿದ ಮುಂಬೈ ನಾಯಕ ರೋಹಿತ್ ಶರ್ಮಾ
“ಮುಂಬೈ ಇಂಡಿಯನ್ಸ್ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಪುಣೆಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ವಾಗ್ದಂಡನೆಗೆ ಒಳಗಾಗಿದ್ದಾರೆ” ಎಂದು ಐಪಿಎಲ್ ಹೇಳಿದೆ. ಬುಮ್ರಾಗೆ ಯಾವುದೇ ದಂಡ ವಿಧಿಸಲಾಗಿಲ್ಲ.